ಅಂತರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್‌.ಝುಬೇರ್ ನಿರ್ದೇಶನ

ಅಂತರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್‌.ಝುಬೇರ್ ನಿರ್ದೇಶನ International Yoga Day: Additional District Collector Mohammed N. Zubair directs to make necessary p

ಲೋಕದರ್ಶನ ವರದಿ

      ಬಳ್ಳಾರಿ 11:  ಜಿಲ್ಲಾ ಕೇಂದ್ರದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್‌.ಝುಬೇರ್ ಅವರು ಸೂಚಿಸಿದರು. 

ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಗುರುವಾರ ಏರಿ​‍್ಡಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜೂ.21 ರಂದು ನಗರದ ಶೆಟ್ರ ಗುರುಶಾಂತಪ್ಪ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಪೂರಕ ಜವಾಬ್ದಾರಿಗಳನ್ನು ವಹಿಸಿಕೊಂಡು ಸಮರ​‍್ಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಅಂದು ಬೆಳಿಗ್ಗೆ 07 ರಿಂದ ಯೋಗ ಕಾರ್ಯಕ್ರಮ ಜರುಗಲಿದ್ದು, ಯೋಗಾಸನ ಮಾಡಲು ನಿರ್ದೇಶನ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಆಗಮಿಸಬಹುದಾಗಿದೆ. ಪತಂಜಲಿ ಯೋಗ ಕೇಂದ್ರ, ಆರ್ಟ್‌ ಆಫ್ ಲಿವಿಂಗ್ ಸೇರಿದಂತೆ ಯೋಗ ಕೇಂದ್ರಗಳು ಅಗತ್ಯವಾಗಿ ಸಹಕಾರ ನೀಡಬೇಕು ಎಂದರು. 

ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳು ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಲಘು ಉಪಹಾರ ಮತ್ತು ನೀರಿನ ವ್ಯವಸ್ಥೆ, ಯೋಗಾಸನ ಮಾಡಲು ಗ್ರೀನ್ ಮ್ಯಾಟ್ ವ್ಯವಸ್ಥೆ ಮತ್ತು ವೇದಿಕೆ ಹಾಗೂ ಧ್ವನಿವರ್ಧಕ ವ್ಯವಸ್ಥೆ ಮಾಡಿಕೊಳ್ಳಬೇಕು. ಆವರಣದೊಳಗೆ ಸಂಪೂರ್ಣ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು. 

ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ನುರಿತ ಯೋಗ ಶಿಕ್ಷಕರನ್ನು ನಿಯೋಜಿಸಬೇಕು. ಆರೋಗ್ಯ ಇಲಾಖೆಯಿಂದ ಅಗತ್ಯ ಚಿಕಿತ್ಸಾ ವ್ಯವಸ್ಥೆ ಸೇರಿದಂತೆ ಇನ್ನಿತರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ನೋಡಿಕೊಳ್ಳಲು ಪೊಲೀಸ್ ಬಂದೋಬಸ್ತ್‌ ಒದಗಿಸಬೇಕು. ಒಟ್ಟಾರೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳಬೇಕು ಎಂದರು. 

ಜಿಲ್ಲಾ ಆಯುಷ್ ಅಧಿಕಾರಿ ಡಾ.ಫಣೇಂದರ್ ಅವರು ಮಾತನಾಡಿ, ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಈ ಬಾರಿ “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಆಚರಣೆ ಮಾಡಲಾಗುತ್ತಿದೆ. ಕಾರ್ಯಕ್ರಮದ ಅಂಗವಾಗಿ ಜೂನ್ 19 ರಂದು ಯೋಗಾಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಸಭೆಯಲ್ಲಿ ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ-ಆಯುಕ್ತ ನಂದೀಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಯೋಗ ಕೇಂದ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು.