ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ  International Yoga Day celebrated at Dharwad District Court

ಧಾರವಾಡ 21 : ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಧಾರವಾಡ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಸದರಿ ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ ರವರು ಅಧ್ಯಕ್ಷ, ಸ್ಥಾನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮಹತ್ವವನ್ನು ಸಾರಲು ಒತ್ತಡ ಮುಕ್ತ ಕಾರ್ಯ ಪರಿಸರವನ್ನು ನಿರ್ಮಿಸಲು ಯೋಗ ಅವಶ್ಯ ಇದೆ ಎಂದು ತಿಳಿಸಿದರು.  

ಮುಖ್ಯ ಅತಿಥಿಯ ಸ್ಥಾನದಲ್ಲಿ ಜಿಲ್ಲಾ ನ್ಯಾಯಾಧೀಶರುಗಳು ಹಾಗೂ ವಕೀಲರ ಸಂಘದ ಅಧ್ಯಕ್ಷರು, ಹಾಜರಿದ್ದರು, ಸದರಿ ಕಾರ್ಯಕ್ರಮದಲ್ಲಿ ನಗರದ ಎಲ್ಲ ಗೌರವಾನ್ವಿತ ನ್ಯಾಯಾಧೀಶರುಗಳು, ನ್ಯಾಯಾಂಗ ಇಲಾಖೆಯ ಸಿಬ್ಬಂದಿಯವರು, ವಕೀಲರು ಹಾಗೂ ಯೋಗ ತರಬೇತದಾರರಾಗಿ ಸಂಜೀವ್ ಕುಮಾರ್ ಹಡಗಲಿ (ವಕೀಲರು) ರವರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಎಂದು ಮಾನ್ಯ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.