ಕುಂದರಗಿಯಲ್ಲಿ ಶಾಸಕರ ಸರಕಾರಿ ಮಾದರಿ ಕೇಂದ್ರ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
International Yoga Day celebrated at MLA's Government Model Central School in Kundaragi
ಕುಂದರಗಿ 21 : ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಯೋಗವು ಅತ್ಯಂತ ಅವಶ್ಯಕವಾಗಿದೆ ಎಂದು ಯೋಗ ಪಟು ವೆಂಕಟೇಶ್ ಉತ್ತೂರ ಹೇಳಿದರು. ಗ್ರಾಮದ ಶಾಸಕರ ಸರಕಾರಿ ಮಾದರಿ ಕೇಂದ್ರ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು. ಶಾಲೆಯ ಮುಖ್ಯಗುರುಗಳು ಮಾತನಾಡಿ, ಯೋಗದ ಮಹತ್ವ ಅದರ ಇತಿಹಾಸ ಮತ್ತು ದೈನಂದಿನ ಜೀವನದಲ್ಲಿ ಅದರ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಹೇಳಿದರು. ಶಿಕ್ಷಕರಾದ ವಿ ಜಿ ಪಾವಲೆ ಮಾತನಾಡಿ ಧ್ಯಾನ ಮತ್ತು ಪ್ರಾಣಯಾಮವು ಮನಸ್ಸನ್ನು ಶಾಂತಿ ಗೊಳಿಸಿ ಓದಿನಲ್ಲಿ ಏಕಾಗ್ರತೆ ಮತ್ತು ನೆನಪಿನ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಶಿಕ್ಷಕರಾದ ಎಮ್ ಸಿ ಶಿರೂರ ಮಾತನಾಡಿ. ಯೋಗಾಸನಗಳು ದೇಹವನ್ನು ದೃಢಗೊಳಿಸುತ್ತವೆ ನಮ್ಯತೆಯನ್ನು ಹೆಚ್ಚಿಸುತ್ತವೆ ಮತ್ತು ಸರಿಯಾದ ಭಂಗಿಯನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಈ ಕಾರ್ಯಕ್ರಮದ ಶಾಲೆಯ ಶಿಕ್ಷಕರಾದ ಎಮ್ ಸಿ ಪಟ್ಟಣಶೆಟ್ಟಿ ಶರೀಫ ಬೂದಿಹಾಳ ಪ್ರೇಮಾ ಹಿರೇಮಠ ಶೋಭಾ ಕುನ್ನಾಳ ಮುಂತಾದವರು ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 