ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಕಾರವಾರದಲ್ಲಿ ಚಾಲನೆ ನೀಡಿದರು: ಸತೀಶ್ ಸೈಲ್
International Yoga Day celebrations launched in Karwar: Satish Sail
ಕಾರವಾರ 21: ಪ್ರತಿಯೊಬ್ಬರಿಗೂ ಉತ್ತಮ ಜೀವನ ಸಾಗಿಸಲು ಆರೋಗ್ಯ ಬಹಳ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು.ಅವರು ಶನಿವಾರ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ, ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಚಿಕ್ಕವರಿಂದ ದೊಡ್ಡವರವರೆಗೆ ಎಲ್ಲರಿಗೂ ಮಾನಸಿಕ ಒತ್ತಡವಿರುತ್ತದೆ ಆದರಲ್ಲೂ ಶಾಲಾ ಕಾಲೇಜು ಮಕ್ಕಳಲ್ಲಿ ಹೆಚ್ಚಿನ ಒತ್ತಡ ಇರುತ್ತದೆ ಆದರಿಂದ ಪ್ರತಿ ಶಾಲೆಗಳಲ್ಲಿ ಮಕ್ಕಳಿಗೆ ಯೋಗವನ್ನು ಹೇಳಿಕೊಡುವಂತೆ ಶಿಕ್ಷಣ ಇಲಾಖಾಧಿಕಾರಿಗಳಿಗೆ ಸೂಚಿಸಿದ ಅವರು, ಇತ್ತಿಚಿನ ದಿನಗಳಲ್ಲಿ ಆನ್‌ಲೈನ್ ಸೇವೆಗಳ ಮೂಲಕ ಪಡೆಯುವ ರೆಡಿಮೇಡ್ ಫುಡ್ ಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ತಮ ಆಹಾರ ಸೇವನೆಯ ಜೊತೆಯಲ್ಲಿ , ಆಸಕ್ತಿಯಿಂದ ಯೋಗವನ್ನು ಮಾಡಿ ಆರೋಗ್ಯವಂತರಾಗಿರಬೇಕು ಎಂದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ವಿಶ್ವದಲ್ಲೇ ಇಂದು ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ.ನಮ್ಮ ಪೂರ್ವಜರು ಪ್ರತಿ ಕ್ಷಣ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದರು ಇಂದಿನ ಆಧುನಿಕ ಕಾಲದಲ್ಲಿ ಯಾರು ಕೂಡ ಹೆಚ್ಚಿನ ದೈಹಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ ಪ್ರತಿದಿನ ಯೋಗ ಮಾಡುವುದರ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಪಡೆಯಬಹುದಾಗಿದೆ ಎಂದರು.ಜಿಲ್ಲೆಯಲ್ಲಿ ಯೋಗ ಕಲಿಕೆಗೆ ಪ್ರತಿ ತಾಲೂಕಿನಲ್ಲೂ ಯೋಗ ತರಬೇತಿದಾರರಿದ್ದಾರೆ, ಅವರ ಮೂಲಕ ದೈಹಿಕ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದ್ದು, ಅವರು ಯೋಗವನ್ನು ಕಲಿತು ತಮ್ಮ ಶಾಲೆಗಳಲ್ಲಿ ಮಕ್ಕಳಿಗೆ ಯೋಗವನ್ನು ಹೇಳಿಕೊಡಲಾಗುವುದು ಎಂದ ಅವರು ಸಾರ್ವಜನಿಕರು ಆಯುಷ್ ಇಲಾಖೆಯಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರ ಅಂಕೋಲೆಕರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಬ್ರಹ್ಮ ಕುಮಾರಿ ಕೇಂದ್ರದ ಕವಿತಾ, ಪತಂಜಲಿ ಯೋಗ ಕೇಂದ್ರದ ಪ್ರೇರಣ ನಾಯ್ಕ ಡಾ. ಅನು ಜಯಪ್ರಕಾಶ್, ಡಾ. ತಾರನಾಥ್ , ಎಲ್.ಕೆ ನಾಯ್ಕ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪೊಲೀಸ್ ಸಿಬ್ಬಂದಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು ಮತ್ತಿತರರು ಭಾಗವಹಿಸಿ, ಯೋಗಾಭ್ಯಾಸ ಮಾಡಿದರು.ಆಯುಷ್ ಇಲಾಖೆಯ ಜಿಲ್ಲಾ ಆಯುಷ್ ಅಧಿಕಾರಿ (ಪ್ರ) ಡಾ. ಭಾರತಿ ದೇವಿ ಸ್ವಾಗತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 