ಹಾವೇರಿ17: ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ಇದೇ ಜೂನ್ 21 ರಂದು ಶುಕ್ರವಾರ ಬೆಳಿಗ್ಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವ ಸಿದ್ಧತಾ ಸಭೆ ನಡೆಸಿದರು.
ಜೂನ್ 19 ರಂದು ಬೆಳಿಗ್ಗೆ 9 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜಾಗೃತಿ ಮೂಡಿಸಲು ಜಿಲ್ಲಾ ಕ್ರೀಡಾಂಗಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಯೋಗ ನಡಿಗೆ ಹಮ್ಮಿಕೊಳ್ಳುವುದು ಹಾಗೂ ಜೂನ್ 21 ರಂದು ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ವಿದ್ಯಾಥರ್ಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಕನಿಷ್ಠ ಒಂದುವರೆಸಾವಿರ ಜನ ಭಾಗವಹಿಸುವ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಜಿಲ್ಲಾ ಕ್ರೀಡಾಂಗಣವನ್ನು ಸಜ್ಜುಗೊಳಿಸುವಂತೆ ಆಯುಷ್ ಅಧಿಕಾರಿಗಳು ಹಾಗೂ ಜಿಲ್ಲಾ ಯುವ ಜನ ಸೇವಾ ಹಾಗೂ ಕ್ರೀಡಾ ಅಧಿಕಾರಿಗಳಿಗೆ ಸೂಚಿಸಿದರು.
ಜೂ.21 ರಂದು ಶುಕ್ರವಾರ ಬೆಳಿಗ್ಗೆ 6-30ಕ್ಕೆ ವಿದ್ಯಾರ್ಥಿಗಳು ಸಾರ್ವಜನಿಕರು ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶಗೊಳ್ಳುವುದು, ವಿಶ್ವದಾದ್ಯಂತ ಏಕಕಾಲದಲ್ಲಿ ಬೆಳಿಗ್ಗೆ 7 ಗಂಟೆಯಿಂದ 7-40ರವರೆಗೆ ಯೋಗಾಭ್ಯಾಸ ಆರಂಭಗೊಳ್ಳುವುದು, ವಿವಿಧ ಬಗೆಯ ಎಂಟು ಆಸನಗಳು ಪ್ರದರ್ಶನ ನಡೆಯಲಿದೆ. ವಿದ್ಯಾಥರ್ಿಗಳು ಸಾರ್ವಜನಿಕರಿಗೆ ನುರಿತ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಲಘು ಉಪಹಾರ ವ್ಯವಸ್ಥೆ, ಕ್ರೀಡಾಂಗಣದ ಸ್ವಚ್ಛತೆ, ಕ್ರೀಡಾಂಣದೊಳಗೆ ಯೋಗ ಪ್ರದರ್ಶನಕ್ಕೆ ಮ್ಯಾಟಿನ ವ್ಯವಸ್ಥೆ ಸೇರಿದಂತೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಆಯುಷ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕ್ರೀಡಾ ಇಲಾಖೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಜೂನ್ 21 ರಂದು ಯೋಗ ಪ್ರದರ್ಶನದಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಯೋಗಮ್ಯಾಟ್ನೊಂದಿಗೆ ಭಾಗವಹಿಸಲು ಹಾಗೂ ಜೂನ್ 19ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಳ್ಳಲಿರುವ ಯೋಗ ಜಾಥಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಿರೋಳ ಮನವಿ ಮಾಡಿಕೊಂಡರು.
ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗರಾಜ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಶಾಕಿರ್ಅಹ್ಮದ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಣ್ಣ, ದೈಹಿಕ ಶಿಕ್ಷಣಾಧಿಕಾರಿ ಇಚ್ಚಂಗಿ, ಜಿಲ್ಲಾ ಯೋಗ ಸಂಸ್ಥೆಯ ಅಧ್ಯಕ್ಷ ಪ್ರೇಮಕುಮಾರ ಮುದ್ದಿ ಹಾಗೂ ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆಯುಷ್ ಅಧಿಕಾರಿಗಳು ಉಪಸ್ಥಿತರಿದ್ದರು.