ಬಳ್ಳಾರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಬಳ್ಳಾರಿಯಲ್ಲಿ ಅದ್ಧೂರಿಯಾಗಿ ಆಚರಿಸಲು ಜಿಪಂ ಸಿಇಒ ನಿತೀಶ್.ಕೆ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಜೂ.21ರಂದು ಬೆಳಗ್ಗೆ 6.30ಕ್ಕೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಬಳ್ಳಾರಿಯ ವಿವಿಧ ಶಾಲಾ-ಕಾಲೇಜುಗಳಿಂದ 1 ಸಾವಿರಕ್ಕೂ ಹೆಚ್ಚು ವಿದ್ಯಾಥರ್ಿಗಳು ಈ ಯೋಗ ದಿನಾಚರಣೆ ಮತ್ತು ಯೋಗ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಯೋಗದ ಅಭ್ಯಾಸ ನಂತರ ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಲಘುಪಾನಿಯ ವಿತರಣೆ ನಡೆಯಲಿದೆ ಎಂದು ಅವರು ವಿವರಿಸಿದರು.
ಕಾರ್ಯಕ್ರಮದ ನಂತರ ಯೋಗದ ಮಹತ್ವ ಹಾಗೂ ಸಂದೇಶ ಸಾರುವ ಯೋಗ ಜಾಥಾವು ನಗರದ ಮುನ್ಸಿಪಲ್ ಮೈದಾನದಿಂದ ಆರಂಭವಾಗಿ ರಾಯಲ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಲಿದೆ ಎಂದು ಜಿಪಂ ಸಿಇಒ ಅವರು ವಿವರಿಸಿದರು.
ಯೋಗ ಆಸಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.
ವಿವಿಧ ಯುವ ಸಂಘಟನೆಗಳ ಯೋಗಾಸಕ್ತ ಸದಸ್ಯರು, ಯೋಗಜಾಥಾದಲ್ಲಿ ಸಕ್ರಿಯವಾಗಿರುವ ಯುವ ಸಂಘಟನೆಗಳು ಮತ್ತು ಯೋಗಾಸಕ್ತ ಸದಸ್ಯರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಯುವಜನ ಸೇವಾ ಹಾಗೂ ಕ್ರಿಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸರಕಾರಿ ನೌಕರರು ಈ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಹೇಳಿದ ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು ಎಂದು ಹೇಳಿದರು. ತುತರ್ು ಸೇವಾ ಚಿಕಿತ್ಸೆಗೆ ತತರ್ು ವಾಹನವನ್ನು ನಿಯೋಜಿಸಿ ಒರ್ವ ವೈದ್ಯಾಧಿಕಾರಿಗಳನ್ನು ಆಯೋಜಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ವಂದನಾ ಗಾಳಿ, ಪಾಲಿಕೆಯ ಆಯುಕ್ತೆ ತುಷಾರಮಣಿ, ಡಿಡಿಪಿಐ ಶ್ರೀಧರನ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.