ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ
International Yoga Day program
ರಾಯಬಾಗ 21 : ಯೋಗ ಮಾಡುವುದರಿಂದ ನಾವು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿ, ಆರೋಗ್ಯಯುತ ಜೀವನ ನಡೆಸಲು ಸಾಧ್ಯವೆಂದು ಪುಣೆಯ ಮುದಿತಾ ಯೋಗ ಕರಿಯರ್ ಆರ್ಕಿಟೆಕ್ಟ್ ಸಂಸ್ಥಾಪಕಿ ಸುಧಾ ಮಸೋಡಗಿ ಹೇಳಿದರು. ಭಾನುವಾರ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆ ಆವರಣದಲ್ಲಿ ಹೊಸ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆ, ಬಾಜೀರಾವ ಮಗದುಮ್ಮ ಪ್ರೌಢ ಶಾಲೆ, ಆದರ್ಶ ಸ್ವತಂತ್ರ ಪದವಿ ಪೂವ ಮತ್ತು ಪದವಿ ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಮದಲ್ಲಿ ಹಮ್ಮಿಕೊಂಡಿದ್ದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಪಘಾತದಲ್ಲಿ ಗಾಯಗೊಂಡಿದ್ದ ನಾನು, ಇಂದು ಯೋಗಾಸನ ಮಾಡುವುದರ ಮೂಲಕ ಆರೋಗ್ಯ ಸುಧಾರಿಸಿಕೊಂಡು ಈ ವೇದಿಕೆ ಮೇಲೆ ಬಂದು ತಮ್ಮ ಎದುರು ಬಂದು ನಿಂತಿದ್ದೇನೆ. ಯೋಗದಿಂದ ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು ಯಶಸ್ವಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ಯುವ ಮುಖಂಡ ಧುಳಗೌಡ ಪಾಟೀಲ ಮಾತನಾಡಿ, ಒಳ್ಳೆಯ ಶಿಕ್ಷಣ ಮತ್ತು ಆರೋಗ್ಯ ಪಡೆದುಕೊಂಡರೆ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಹಳ್ಳಿಗಳು ಸುಧಾರಸಿದರೆ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯವೆಂದರು. ಶಿಕ್ಷಣ ಸಂಸ್ಥೆಯವರು ಶಾಲೆ ಆವರಣದಲ್ಲಿ ಹುಣಸೆ ಮರಗಳು ಮತ್ತು ಇತರೆ ಗಿಡಗಳನ್ನು ಬೆಳೆಸಿ, ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ಒಳ್ಳೆ ವಾತಾವರಣ ದೊರಕುವಂತೆ ಮಾಡಿದ್ದಾರೆ ಎಂದು ತಿಳಿಸಿದರು. ನಮ್ಮ ಪ್ರಾಚೀನ ಯೋಗ ಪದ್ದತಿಗೆ ಇಂದು ವಿಶ್ವ ಮಾನ್ಯತೆ ದೊರಕಿದ್ದು, ವಿಶ್ವದೆಡೆಯಲ್ಲಿ ಇಂದು ಯೋಗ ದಿನವನ್ನಾಗಿ ಆಚರಿಸುತ್ತಿರುವುದು ನಮ್ಮಗೆ ಹೆಮ್ಮೆಯ ವಿಷಯವಾಗಿದೆ. ಯೋಗದಿಂದ ಅನೇಕ ರೋಗದಿಂದ ಮುಕ್ತಿ ಪಡೆಯಲು ಸಾಧ್ಯವೆಂದು ಪೂರ್ವಿಕರು ತಿಳಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 