ನಾಳೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ
International Yoga Day tomorrow
ಲೋಕದರ್ಶನ ವರದಿ
ಬೆಳಗಾವಿ 19: ಇಲ್ಲಿನ ಶಿವಬಸವ ನಗರದ ಎಸ್ ಜಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಮೈದಾನದ ಆವರಣದಲ್ಲಿ ಜೂನ್ 21 ರಂದು ಬೆಳಗಿನ 6:30 ಗಂಟೆಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಹಿಮಾಲಯನ್ ಧ್ಯಾನ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ. ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಏರಿ್ಡಸಲಾಗಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳವರು ವಹಿಸಿಕೊಳ್ಳಲಿದ್ದಾರೆ. ಹಿಮಾಲಯನ್ ಯೋಗ ಸಾಧಕರಾದ ನಿರಂಜನ ಮಹಾಸ್ವಾಮಿಗಳು ಯೋಗ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಬಸವನ ಬಾಗೇವಾಡಿಯ ಖ್ಯಾತ ವಾಗ್ಮಿ ಅಶೋಕ್ ಹಂಚಲಿ ಅವರು ಅತಿಥಿ ಉಪನ್ಯಾಸಕರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಲಾಭವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 