ಅಂತಾರಾಷ್ಟ್ರೀಯ ಯೋಗ ಭಾರತದಲ್ಲಿ ಟಾಪ್ ಯೋಗ
International Yoga Top Yoga in India
ಹೂವಿನ ಹಡಗಲಿ 21 : ಮೊದಲ ಬಾರಿಗೆ ಪರಿಚಯಿಸಲ್ಪಟ್ಟ ಅಂತಾರಾಷ್ಟ್ರೀಯ ಯೋಗ ಇದೀಗ ಭಾರದಲ್ಲಿ ಟಾಪ್ ಯೋಗ ತನ್ನ ಹಿರಿಮೆಯನ್ನು ಹೆಚ್ಚಿಸಿದೆ ಎಂದು ಮಲ್ಲಿಗೆ ಯೋಗ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೋಡಿಹಳ್ಳಿ ಕೊಟ್ರೇಶ ಹೇಳಿದರು.ಪಟ್ಟಣದ ಗಂಗಾವತಿ ಭಾಗ್ಯಮ್ಮ ಪದವಿ ಕಾಲೇಜಿನ ಆವರಣದಲ್ಲಿ ಶನಿವಾರ ಮಲ್ಲಿಗೆ ಯೋಗ ಚಾರಿಟೇಬಲ್ ಟ್ರಸ್ಟ್ ಜಿ ಬಿ ಆರ್ ಕಾಲೇಜು ಗೃಹರಕ್ಷಕ ದಳ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಪತ್ರಕರ್ತರ ಬಳಗ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿ ದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಆಧುನಿಕ ಒತ್ತಡದ ಜಂಜಾಟದಲ್ಲಿ ನೆಮ್ಮದಿ ಪಡೆಯಲು ಯೋಗಾಸನಗಳು ತುಂಬಾ ಸಹಕಾರಿಯಾಗಿವೆ ಎಂದರು.ಯೋಗ ದಿನಾಚರಣೆ ಬರೀ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ವಿವಿಧ ಬಗೆಯ ಯೋಗಾಸನಗಳನ್ನು ನಿತ್ಯ ಮಾಡುವಹಾಗೆ ಮಾರ್ಗದರ್ಶನ ನೀಡಿಬೇಕು ಎಂದು ತಿಳಿಸಿದರು.ಮಲ್ಲಿಗೆ ಯೋಗ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿದಿನ ಹಳೇ ಆಸ್ಪತ್ರೆ ಆವರಣದಲ್ಲಿ ಯೋಗ ಅಭ್ಯಾಸ ತರಬೇತಿ ಇರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಜಿ ಬಿ ಆರ್ ಕಾಲೇಜು ಆಡಳಿತ ಮಂಡಳಿ ಸದಸ್ಯ ಕೋಡಿಹಳ್ಳಿ ಮುದುಕಪ್ಪ, ಪ್ರಾಚಾರ್ಯರಾದ ಪ್ರೊ ಎಸ್ ಎಸ್ ಪಾಟೀಲ್ ಅಮರೇಗೌಡ ಪಾಟೀಲ ಜೇಸಿ ರಾಯಲ್ ಅಧ್ಯಕ್ಷ ಕೋಡಿಹಳ್ಳಿ ವಿನಾಯಕ ತಾಲೂಕು ದೈಹಿಕ ಅಧೀಕ್ಷಕರಾದ ರಫಿ ಅಹಮದ್ ಖವಾಸ್ ಡಾ ಶಿವಕುಮಾರ್ ಇತರರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕರಾದ ಶಿವಮೂರ್ತಯ್ಯ, ಅಶೋಕ್ ಕೌಶಲ್ಯ ಬಾಯಿ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿಸಿದರು.ಪಟ್ಟಣದ ಜಿ ಪಿ ಜಿ, ತುಂಗಭದ್ರಾ ಪ್ರೌಢಶಾಲೆ,ಜಿ ಬಿ ಆರ್ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಗೃಹರಕ್ಷಕ ದಳದವರು ಮೊದಲಾದವರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 