ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 4ನೇ ಬಾರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು, ಮೇ 11,ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಮತ್ತು ಸೆಂಟ್ರಲ್ ಏಷ್ಯಾ ವಲಯದಲ್ಲಿ 2020ರ ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿ ವಿಭಾಗದಲ್ಲಿ ಈ ಪುರಸ್ಕಾರಕ್ಕೆ ಪಾತ್ರವಾಗಿ ಮಹತ್ವದ ಸಾಧನೆ ಮಾಡಿದೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಪ್ರಮಾಣದ ಗ್ರಾಹಕರು ಮತ ಹಾಕಿ ನಾಲ್ಕನೇ ಬಾರಿಗೆ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, 11 ವರ್ಷಗಳ ಈ ವಿಮಾನ ನಿಲ್ದಾಣಕ್ಕೆ ಈಗಾಗಲೇ ಹಲವಾರು ಪ್ರಶಸ್ತಿ, ಪುರಸ್ಕಾರಗಳು ದೊರೆತಿವೆ. ಅತಿ ಹೆಚ್ಚು ಮಂದಿ ಪ್ರಯಾಣಿಸುವ ವಿಮಾನ ನಿಲ್ದಾಣ ಎಂಬ ಶ್ರೇಯಕ್ಕೂ ಪಾತ್ರವಾಗಿದೆ.ಪ್ರಶಸ್ತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕೈಟ್ರಾಕ್ಸ್ ನ ಮುಖ್ಯ ಕಾರ್ಯನಿರ್ವಾಹಕ ಎಡ್ವರ್ಡ್ ಪ್ಲೈಸ್ಟೆಡ್ ಪ್ರಶಸ್ತಿ ಪ್ರಕಟಿಸಿದ್ದು,. ಭಾರತ ಜಾಗತಿಕ ವಾಯುಯಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆಯತ್ತ ದಾಪುಗಾಲಿಟ್ಟಿದ್ದು, ಗ್ರಾಹಕರಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ಕೆಂಪೇಗೌಡ ವಿಮಾನ ನಿಲ್ದಾಣ ಯಶಸ್ಸಿನ ಹಾದಿಯಲ್ಲಿ ಸಾಗಿದೆ ಎಂದು ಹೇಳಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 