55ನೇ ಕಲ್ಚರಲ್ ಫೆಸ್ಟ್ ಮತ್ತು ಕಲ್ಚರಲ್ ಎಕ್ಸ್ಚೇಂಜ್ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಗೌರವ
International honor at the 55th Cultural Fest and Cultural Exchange program
ದುಬೈನಲ್ಲಿ ಲಕ್ಷ್ಮಣ ಸುವರ್ಣ ಅವರಿಗೆ ‘ಗೋಲ್ಡನ್ ಐಕಾನಿಕ್’ ಪ್ರಶಸ್ತಿ
ಬೆಂಗಳೂರು 0 2: ಖ್ಯಾತ ಸಂಗೀತ ನಿರ್ದೇಶಕರಾದ ಬೆಂಗಳೂರಿನ ಶ್ರೀ ಲಕ್ಷ್ಮಣ ಸುವರ್ಣ ಅವರಿಗೆ ಇದೇ ಜುಲೈ 26ರಂದು ದುಬೈನಲ್ಲಿ ನಡೆದ 55ನೇ ಕಲ್ಚರಲ್ ಫೆಸ್ಟ್ ಹಾಗೂ ಕಲ್ಚರಲ್ ಎಕ್ಸ್ಚೇಂಜ್ ಕಾರ್ಯಕ್ರಮದಲ್ಲಿ ‘ಗೋಲ್ಡನ್ ಐಕಾನಿಕ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಗೀತ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಲ್ಲಿಸುತ್ತಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿತ್ತು.
ಲಕ್ಷ್ಮಣ ಸುವರ್ಣ ಅವರು ಈಗಾಗಲೇ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ದುಬೈನಲ್ಲಿ ಅಂತರರಾಷ್ಟ್ರೀಯ ಮಟ್ಟದ ಈ ಗೌರವ ಲಭಿಸಿರುವ ಹಿನ್ನೆಲೆಯಲ್ಲಿ ವಿಕೆಎಂ ಕಲಾವಿದರ ಸಂಘಟನೆ, ಸಂಗೀತ ಕ್ಷೇತ್ರದ ಗಣ್ಯರು ಹಾಗೂ ಅವರ ಅಭಿಮಾನಿಗಳು ಲಕ್ಷ್ಮಣ ಸುವರ್ಣ ಅವರನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 