ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಜರ್ಾಲ ಸೇವೆ ಬಂದ್

ಬೆಂಗಳೂರು, ಆ.28- ಪ್ರತಿಷ್ಠಿತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಜರ್ಾಲ ಸೇವೆ ಕಳೆದ ನಾಲ್ಕು ದಿನಗಳಿಂದ ಬಂದ್ ಆಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ಸ್ಥಳೀಯ ವಿಮಾನಯಾನ ಸಂಸ್ಥೆ ಸಿಬ್ಬಂದಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಳೆದ ಶುಕ್ರವಾರದಿಂದ ಆಪ್ಟಿಕಲ್ ಫೈಬರ್ ಬದಲಾವಣೆ ನೆಪದಲ್ಲಿ ಸಂಪೂರ್ಣ ಅಂತಜರ್ಾಲ ಸೇವೆಯನ್ನು ಕಡಿತಗೊಳಿಸಲಾಗಿದೆ. 

ಪ್ರಯಾಣಿಕರಿಗೆ ಯಾವುದೇ ರೀತಿಯ ಮಾಹಿತಿ ನೀಡದೆ ಇರುವುದರಿಂದ  ಕೆಲವರು ಆಡಳಿತ ಮಂಡಳಿ ವಿರುದ್ಧ ಬೇಸರಗೊಂಡಿದ್ದಾರೆ.

ಕೆಲವು ವಿಮಾನಯಾನ ಸಂಸ್ಥೆಗಳು ಕೂಡ ಶೀಘ್ರದಲ್ಲೇ ದುರಸ್ತಿಗೊಳಿಸಬೇಕೆಂದು ಒತ್ತಡ ಹೇರುತ್ತಿದ್ದರೂ ಕೂಡ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ.