ಬೆಂಗಳೂರು, ಏ.27, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ ವ್ಯಕ್ತಿ ಕಳೆದ 10 ವರ್ಷಗಳಿಂದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿದ್ದರು ಎಂದು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ತಿಳಿಸಿದ್ದಾರೆ.ಇಂದು 50 ವರ್ಷದ ಸೋಂಕಿತ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಸೋಂಕಿತ ನಿಗೆ ಕಿಡ್ನಿ ವೈಫಲ್ಯ ವು ಇರುವುದರಿಂದ ಕೆಲ ವರ್ಷಗಳಿಂದ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ಏ. 24ರಂದು ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು ಎಂದರು.ಇಂದು ಬೆಳಗ್ಗೆ 8.30ರ ಸುಮಾರಿಗೆ ಅವರು ವಿಕ್ಟೋರಿಯಾ ಆಸ್ಪತ್ರೆಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪ್ರಾಥಮಿಕ ಮಾಹಿತಿ ಆಧರಿಸಿ ಮುಂದಿನ ತನಿಖೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.