ಬಹುಮಾನ ಹಣ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ಬಹುಮಾನ ಹಣ ಮಂಜೂರಾತಿಗಾಗಿ ಅರ್ಜಿ ಆಹ್ವಾನ Invitation for applications for award of prize money

ಲೋಕದರ್ಶನ ವರದಿ 

ಜಮಖಂಡಿ 18: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರಾತಿಗಾಗಿ 2026ನೇ ಮಾರ್ಚ ತಿಂಗಳಿನಲ್ಲಿ ಜರುಗಿದ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳಲ್ಲಿ ಜಮಖಂಡಿ, ರಬಕವಿ-ಬನಹಟ್ಟಿ ಹಾಗೂ ತೇರದಾಳ ತಾಲೂಕಿನ ವ್ಯಾಪ್ತಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.  

ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ಎಸ್‌ಎಸ್‌ಎಲ್‌ಸಿ ಶೇ, 60 ರಿಂದ 74,99 ವರಗೆ 7 ಸಾವಿರ ರೂ,ಗಳು ಶೇ, 75 ರಿಂದ 100 ವರಗೆ 15 ಸಾವಿರ ರೂ,ಗಳ ಬಹುಮಾನ ಹಣವನ್ನು ಮಂಜೂರು ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೇವ ಪಾಸೋಡೆ ತಿಳಿಸಿದ್ದಾರೆ. 

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಸಂಖ್ಯೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ : ತಿತಿತಿತಿ.ಞಚಿಡಿ.ಟಿಛಿ.ಟಿ ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ನಂತರ ಅರ್ಜಿ ನಮೂನೆಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್‌, ಬ್ಯಾಂಕ್ ಪಾಸ್‌ಬುಕ್ ಹಾಗೂ ಎಸ್‌.ಎಸ್‌.ಎಲ್‌.ಸಿ ಅಂಕಪಟ್ಟಿ ದೃಢೀಕರಣದೊಂದಿಗೆ ಲಗತ್ತಿಸಿ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ 3 ದಿನಗಳ ಒಳಗಾಗಿ ಹಾರ್ಡ್‌ ಕಾಪಿ ದೃಢೀಕೃತ ದಾಖಲೆಗಳೊಂದಿಗೆ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಪ್ರಕಟನೆಗೆ ತಿಳಿಸಿದ್ದಾರೆ.