ಏ.26 ರಿಂದ ಏ.30 ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನದ ಆಮಂತ್ರಣ ಪತ್ರಿಕೆ ಬಿಡುಗಡೆ
Invitation letter released for spiritual discourse by Hosalli and Koppal Sri from 26th to 30th April
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿ ಶಿಲಾ ಮಂಟಪ ಲೋಕಾರೆ್ಣ ನಿಮಿತ್ಯ ಏ.26 ರಿಂದ ಏ.30 ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಏ.16ರಂದು ಸ್ಥಳೀಯ ಮಹಾಲಕ್ಷೀ ದೇವಾಲಯ ಸಭಾಂಗಣದಲ್ಲಿ ನಡೆಯಿತು.
ಏ.26 ರಿಂದ ಏ.29 ರವರೆಗೆ ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮಿಜಿ ಅವರಿಂದ ನಾಲ್ಕು ದಿನಗಳ ಕಾಲ ಪ್ರತಿ ದಿನ ಸಂಜೆ 7 ರಿಂದ 8 ಗಂಟೆಯವರೆಗೆ ವಿವಿಧ ವಿಷಗಳ ಮೇಲೆ ಗಜಾನನ ಪ್ರವಚನ, ಏ. 30 ರಂದು ಪ್ರವಚನ ಮಂಗಲ ಕಾರ್ಯಕ್ರಮ, ಬೆ. 10 ಗಂಟೆಗೆ ಕೊಪ್ಪಳ ಗವಿಸಿದ್ಧೇಶ್ವರ ಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರಿಂದ ಸ್ಥಳೀಯ ವಿವಿಡಿ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಆಧ್ಯಾತ್ಮಿಕ ಪ್ರವಚನ ಜರುಗಲಿದೆ.
ಏ.26 ರಂದು ಸಂಜೆ 5 ಗಂಟೆಗೆ ಸ್ಥಳೀಯ ಅಡವಿಸಿದ್ಧೇಶ್ವರ ದೇವಸ್ಥಾನದಿಂದ ಗಜಾನನ ವೇದಿಕೆವರೆಗೆ ಸುಮಂಗಲೆಯರಿಂದ ಆರತಿ ಮತ್ತು ಕುಂಭಮೇಳ, ಸಕಲ ವಾಧ್ಯಮೇಳಗಳೊಂದಿಗೆ ಸ್ವಾಗತ ಜರುಗಲಿದೆ. ಏ.30ರಂದು ಬೆ. 8 ಗಂಟೆಗೆ ಬಳಗಾನೂರದ ಶಿವಶಾಂತವೀರ ಶರಣರಿಂದ ಶಿವಭಜನೆ ಮೂಲಕ ಗ್ರಾಮದ ವಿವಿಧೆಡೆ ಪಾದಯಾತ್ರೆ ನಡೆಯಲಿದೆ.
ಕಲ್ಲೂರ ಶಂಕರಯ್ಯ ಗುರುಮಠ ಅವರಿಂದ ಸಂಗೀತ, ಮಲ್ಲಿಕಾರ್ಜುನ ಕೊಡಗನೂರ ಅವರಿಂದ ತಬಲಾ ಸೇವೆ ನಡೆಯಲಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿ, ಸಂತ, ಶರಣರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ. ಸ್ಥಳೀಯ ಪಿ.ಕ.ೆಪಿ.ಎಸ್ ಅಧ್ಯಕ್ಷ ಬಸವಂತ ಕೋಣಿ, ಈರಯ್ಯ ಹಿರೇಮಠ, ವಿಜಯ ಹಿರೇಮಠ, ಈಶ್ವರ ಬಳಿಗಾರ, ಲಕ್ಷ್ಮಣ ನೀಲಣ್ಣವರ, ಬಸವರಾಜ ಪಣದಿ, ತಮ್ಮಣ್ಣ ಗಾಣಗಿ ಗೌಡಪ್ಪ ದೇಯಣ್ಣವರ, ಈರಣ್ಣ ಬಳಿಗಾರ, ಶ್ರೀಧರ ದೇಯಣ್ಣವರ, ರಾಚಪ್ಪ ಮುರಗೋಡ, ಮುತ್ತೆಪ್ಪ ದೇಯಣ್ಣವರ ಸೇರಿದಂತೆ ಕೊಪ್ಪಳ ಮತ್ತು ಹೊಸಳ್ಳಿ ಶ್ರೀಗಳ ಪ್ರವಚನ ಆಯೋಜನೆ ಸಮಿತಿ ಪದಾಧಿಕಾರಿ, ಸದಸ್ಯರು, ಯುವಕರು, ಸ್ಥಳೀಯ ಹಿರಿಯ ನಾಗರಿಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 