ರಾಜ್ಯಮಟ್ಟದ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ
Invitation of poems for the state-level poetry festival
ಸವದತ್ತಿ: ತಾಲೂಕಿನ ಸಹೃದಯ ಸಾಹಿತ್ಯ ಪ್ರತಿಷ್ಠಾನವು ಯುವಕವಿಗಳಿಗೆ ವೇದಿಕೆ ಒದಗಿಸಲು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳಿನಲ್ಲಿ ಹಮ್ಮಿಕೊಳ್ಳಲಾಗುವ ರಾಜ್ಯಮಟ್ಟದ ಕವಿಗೋಷ್ಠಿಗೆ ಆಸಕ್ತ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.
ಕವಿಗಳು ಇತ್ತೀಚೆಗೆ ಬರೆದಿರುವ ತಮ್ಮ ಎರಡು ಕವಿತೆಗಳನ್ನು ಪುಟ್ಟ ಪರಿಚಯದೊಂದಿಗೆ ಅಕ್ಟೋಬರ್ 15ರ ಒಳಗೆ ಕಳಿಸಬೇಕು. ನಿರ್ಣಾಯಕರು ನಿರ್ಣಯಿಸಿದ ಮೂರು ಅತ್ಯುತ್ತಮ ಕವಿತೆಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನಗದು ರೂಪದಲ್ಲಿ ನೀಡಿ ಗೌರವಿಸಲಾಗುವುದು. ಆಯ್ಕೆಯಾದ 30 ಕವಿತೆಗಳನ್ನು ಕವಿಗೋಷ್ಠಿಯಲ್ಲಿ ವಾಚನ ಮಾಡಲು ಅವಕಾಶ ನೀಡಲಾಗುವುದೆಂದು ಪ್ರತಿಷ್ಠಾನದ ಕಾರ್ಯದರ್ಶಿ ರಮೇಶ್ ಕೆ. ತಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕವಿತೆಗಳನ್ನು ಕಳಿಸಬೇಕಾದ ವಿಳಾಸ: ನಾಗೇಶ್ ಜೆ. ನಾಯಕ ಅಧ್ಯಕ್ಷರು, ಸಹೃದಯ ಸಾಹಿತ್ಯ ಪ್ರತಿಷ್ಠಾನ, ‘ಅವ್ವ’ ಶಿವಬಸವ ನಗರ, ರಾಮಾಪೂರ ಸೈಟ್, ಸವದತ್ತಿ-591126. ಬೆಳಗಾವಿ ಜಿಲ್ಲೆ. ಹೆಚ್ಚಿನ ಮಾಹಿತಿಗೆ 9945042737 ಸಂಪರ್ಕಿಸಬಹುದು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 