ಶ್ರೀ ವೆಂಕಟೇಶ್ವರ ಸ್ವಾಮಿಯ 4ನೇ ವರ್ಷದ ಪಾದಯಾತ್ರೆಗೆ ಭಕ್ತರಿಗೆ ಆಹ್ವಾನ
Invitation to devotees for the 4th annual Padayatra of Lord Venkateshwara Swamy
ಗದಗ 22: ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ಬುಧವಾರ ಗದಗದ ಐತಿಹಾಸಿಕ ಶ್ರೀ ವೀರನಾರಾಯಣ ದೇವಸ್ಥಾನದಿಂದ ವೆಂಕಟಾಪುರ ಶ್ರೀ ವೆಂಕಟೇಶ್ವರ ಸ್ವಾಮಿಯ 4ನೇ ವರ್ಷದ ಭವ್ಯ ಪಾದಯಾತ್ರೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣ ಎಚ್. ಹಡಪದ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಪಾದಯಾತ್ರೆ ಕೇವಲ ನಡಿಗೆ ಮಾತ್ರವಲ್ಲ, ಅದು ಆಧ್ಯಾತ್ಮಿಕ ಸಾಧನೆಯಾಗಿದೆ. ಸನಾತನ ಧರ್ಮದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದರ ಜೊತೆಗೆ ದೇಶ ಕಾಯುವ ಸೈನಿಕರು, ಪೊಲೀಸ್ ಸಿಬ್ಬಂದಿ ಹಾಗೂ ಅನ್ನದಾತ ರೈತರ ಕಲ್ಯಾಣಕ್ಕಾಗಿ ಸಂಕಲ್ಪದೊಂದಿಗೆ ಈ ಪಾದಯಾತ್ರೆಯನ್ನು ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.
ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಭಕ್ತರ ಸಂಖ್ಯೆ
ಮೊದಲ ವರ್ಷ ಸುಮಾರು 130 ಭಕ್ತರೊಂದಿಗೆ ಆರಂಭವಾದ ಪಾದಯಾತ್ರೆಯಲ್ಲಿ, ಎರಡನೇ ವರ್ಷ 350, ಮೂರನೇ ವರ್ಷ 700ಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು. ಈ ಬಾರಿ ಸುಮಾರು 1,000ಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನೀರೀಕ್ಷೆ ಇದೆ. ಬುಧವಾರ ಬೆಳಗ್ಗೆ 6 ಗಂಟೆಗೆ ಶ್ರೀ ವೀರನಾರಾಯಣ ದೇವಸ್ಥಾನದಿಂದ ಪಾದಯಾತ್ರೆಗೆ ಚಾಲನೆ ದೊರೆಯಲಿದೆ. ಮಾರ್ಗದುದ್ದಕ್ಕೂ ಪ್ರಸಾದ ವ್ಯವಸ್ಥೆ ಪಾದಯಾತ್ರಿಕರಿಗಾಗಿ ವಿವಿಧ ದಾನಿಗಳು ಮಾರ್ಗದುದ್ದಕ್ಕೂ ಉಪಹಾರ ಹಾಗೂ ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದಾರೆ.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 