ಇರಕಲ್ಲಗಡ: ಬೇಟಿ ಬಚಾವೋ ಬೇಟಿ ಪಡವೂ ಕಾರ್ಯಕ್ರಮ
Irakallagarh: Save the Daughter, Save the Daughter program
ಲೋಕದರ್ಶನ ವರದಿ
ಕೊಪ್ಪಳ 07: ಕೊಪ್ಪಳ ತಾಲೂಕು ಆಡಳಿತ, ತಾಲೂಕು ಪಂಚಾಯತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ, ಕೊಪ್ಪಳ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಶುಕ್ರವಾರ ಇರಕಲ್ಲಗಡ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಬೇಟಿ ಬಚಾವೋ ಬೇಟಿ ಪಡವೂ ಕಾರ್ಯಕ್ರಮ ನಡೆಯಿತು.
ಈ ?ಕಾರ್ಯಕ್ರಮದಲ್ಲಿ ನಾಡಕಛೇರಿ ಉಪತಹಶೀಲ್ದಾರ ಮೈನುದ್ದೀನ್ ನಾಗನೂರು ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಪಂಚಾಯತ ಅಭಿವೃದ್ಧಿ ಅಧಿಕಾರಿ ಪರಮೇಶ್ವರಯ್ಯ ಹಾಗೂ ಇತರ ಮುಖ್ಯ ಅತಿಥಿಗಳು ಸೇರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಶರಣಪ್ಪ ಗದ್ದಿ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಹೆಣ್ಣು ಮಕ್ಕಳ ಭ್ರೂಣ ಹತ್ಯೆ ನಿಷೇಧಿಸಬೇಕು ಹಾಗೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರಾಶಸ್ತ್ರ ನೀಡಬೇಕು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬೇಟಿ ಬಚಾವೋ ಬೇಟಿ ಪಡವೂ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಬಾಲ್ಯ ವಿವಾಹ ನಡೆಯದಂತೆ ನೋಡಿಕೊಳ್ಳಬೇಕು. ಮದುವೆ ಆಯೋಜಕರು, ಧಾರ್ಮಿಕ ಮುಖಂಡರು, ಸಾಮೂಹಿಕ ಅಥವಾ ಸರಳ ಮದುವೆಯ ಸಂದರ್ಭದಲ್ಲಿ ಕಡ್ಡಾಯವಾಗಿ ವಧು ವರರ ವಯಸ್ಸಿನ ಬಗ್ಗೆ ದೃಢೀಕರಣ ಪಡೆದು ಇಲಾಖೆಯಿಂದ ಅನುಮತಿ ಪಡೆಯಬೇಕು ಹಾಗೂ ಕಾಯ್ದೆಯಡಿ ಸಂಘ ನೋಂದಣಿ ಮತ್ತು ನವೀಕರಣವು ಕಡ್ಡಾಯವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಪ್ರತಿಭಾ ಅವರು ಪೋಸ್ಕೋ ಕಾಯ್ದೆ ಕುರಿತು ವಿವರವಾಗಿ ಮಾಹಿತಿ ನೀಡಿದರು. ವೀರಭಸಪ್ಪ ಪಟ್ಟಣಶೆಟ್ರು ಹಾಗೂ ಶರಣಪ್ಪ ಸಿಂಗನಾಳ ಅವರು ಮಕ್ಕಳ ಸಹಾಯವಾಣಿ 1098 ಹಾಗೂ ತುರ್ತು ಸೇವೆ ಸಹಾಯವಾಣಿ 112 ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕಿ ಮಂಜುಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರು ಹಾಗೂ ಗ್ರಾಮರಸ್ಥರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 