ಸಾರ್ಥಕ ಶಿಕ್ಷಕ ಪ್ರಶಸ್ತಿಗೆ ಈರನಗೌಡ ಆಯ್ಕೆ

ಸಾರ್ಥಕ ಶಿಕ್ಷಕ ಪ್ರಶಸ್ತಿಗೆ ಈರನಗೌಡ ಆಯ್ಕೆ  Iranagowda selected for Meritorious Teacher Award

ದೇವರಹಿಪ್ಪರಗಿ 23: ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಕಲಬುರ್ಗಿಯ ಎಂ. ಎಸ್‌. ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ದೇವರ ಹಿಪ್ಪರಗಿಯ ಈರನಗೌಡ ಕೆ ಪಾಟೀಲ್ ಅವರಿಗೆ ಕಲಬುರ್ಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅವರು ಕೊಡಮಾಡುವ  ಸಾರ್ಥಕ ಶಿಕ್ಷಕ ಪ್ರಶಸ್ತಿ ದೊರೆತಿದೆ.  

ಕಲಬುರ್ಗಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಪ್ರತಿ ವರ್ಷ ಸುಭದ್ರ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿರುವ ಜಿಲ್ಲೆಯ ಆಯ್ದ ವಿಶೇಷ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸೆಪ್ಟೆಂಬರ್ 26 ರಂದು ಬೆಳಿಗ್ಗೆ 11 ಘಂಟೆಗೆ ಕಲಬುರ್ಗಿಯ  ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಏರಿ​‍್ಡಸಲಾಗಿದ್ದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ.ಸುಶೀಲಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.  

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಜಗದೇವ ಗುತ್ತೆದಾರ, ಡಿಡಿಪಿಐ ಸೂರ್ಯಕಾಂತ ಮದಾನೆ ಉಪಸ್ಥಿತರಿರಲಿದ್ದಾರೆ.  

ಪ್ರಶಸ್ತಿ ಪಡೆದ ಈರನಗೌಡ ಪಾಟೀಲ್‌ರಿಗೆ ದೇವರಹಿಪ್ಪರಗಿ ಗೆಳೆಯಯರ ಬಳಗದ ಸದಸ್ಯರು ಅಭಿನಂದಿಸಿದ್ದಾರೆ.