ಬಾಗ್ದಾದ್, ನ 28- ಇರಾನ ನಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವವರು ಬುಧವಾರ ಇಲ್ಲಿನ ನಜಾಫ್ ನ ಶೈಟ್ ನಗರದಲ್ಲಿರುವ ಇರಾನ್ ರಾಯಭಾರಿ ಕಚೇರಿಗೆ ಬೆಂಕಿ ಇಟ್ಟಿದ್ದಾರೆ.
ಮೊದಲಿಗೆ ರಾಯಭಾರಿ ಕಚೇರಿಯ ಎದುರು ಜಾಥಾ ನಡೆಸಿದ ಪ್ರತಿಭಟನಾಕಾರರು ನಂತರ ಕಟ್ಟಡಕ್ಕೆ ಬೆಂಕಿ ಹಚ್ಚಿದರು.ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಪರಾರಿಯಾಗಿ ಜೀವ ಉಳಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಸರ್ಕಾರಿ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರು ಎಲ್ಲಾ ರಸ್ತೆಗಳನ್ನು ತಡೆದಿದ್ದರಿಂದ ನಜಾಫ್ ಪ್ರಾಂತ್ಯದ ರಾಜ್ಯಪಾಲರು, ಭದ್ರತೆ, ಆರೋಗ್ಯ ಮತ್ತು ಸಾರ್ವಜನಿಕ ಸೇವಾ ಇಲಾಖೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಸರ್ಕಾರ ಭ್ರಷ್ಟಾಚಾರಕ್ಕೆ ಉತ್ತರದಾಯಿಯಾಗಿರಬೇಕು, ಸಾರ್ವಜನಿಕ ಸೇವೆಗಳ ಸುಧಾರಣೆ ಹಾಗೂ ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ಒತ್ತಾಯಿಸಿ ಇರಾಕ್ ನ ಜನರು ಕಳೆದ ಅಕ್ಟೋಬರ್ ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.