ಗಡಿ ಭಾಗದಲ್ಲಿ ನೀರಾವರಿ ಯೋಜನೆ ಜಾರಿಗೆ: ವಿನಾಯಕ ಬಾಗಡಿ
Irrigation project implemented in border area: Vinayak Bagadi
ಲೋಕದರ್ಶನ ವರದಿ
ಸಂಬರಗಿ 26: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಭರವಸೆ ಪೂರ್ಣಗೊಳಿಸಿ ಗಡಿ ಭಾಗದಲ್ಲಿ ನೀರಾವರಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ ಎಂದು ಮಾಜಿ ಜಿಲ್ಲಾ ಪಂಚಾಯತ ಸದಸ್ಯ ವಿನಾಯಕ ಬಾಗಡಿ ಹೇಳಿದರು.
ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅನಂತಪೂರ ಬ್ಲಾಕ್ ಪ್ರಚಾರ ಸಮೀತಿ ಅಧ್ಯಕ್ಷರಾಗಿ ಪೋಪಟ ನಿಕ್ಕಂ ಇವರು ಆಯ್ಕೆಯಾದ ನಂತರ ಅವರನ್ನು ಸತ್ಕರಿಸಿ ಮಾತನಾಡಿ ಅವರು ಮುಂಬರುವ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಗ್ರಾಮ ಪಂಚಾಯತ ಚುನಾವಣೆಗಾಗಿ ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಿ ಒಳಗಿರುವ ಭಿನ್ನತೆಯನ್ನು ಬದಿಗಿಟ್ಟು ಎಲ್ಲರೂ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಅವರು ವಿನಂತಿಸಿದರು.
ಅನಂತಪೂರ ಬ್ಲಾಕ್ ಪ್ರಚಾರ ಸಮೀತಿಯ ಅಧ್ಯಕ್ಷ ಪೋಪಟ ನಿಕ್ಕಂ ಮಾತನಾಡಿ ಪಕ್ಷದ ಆದೇಶದ ಪ್ರಕಾರ ನಾನು ಪಕ್ಷ ಸಂಘಟನೆ ಮಾಡಿ ಮುಂಬರುವ ಹೆಚ್ಚು ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ ಪಕ್ಷವನ್ನು ಬಲಪಡಿಸುತ್ತೇನೆಂದು ಹೇಳಿದರು.
ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಮಹಾದೇವ ಕೋರೆ, ಪಿ.ಕೆ.ಪಿ.ಎಸ್. ಅಧ್ಯಕ್ಷ ನಿಜಗುಣಿ ಮಗದುಮ್, ಪಿ.ಕೆ.ಪಿ.ಎಸ್. ಉಪಾಧ್ಯಕ್ಷ ಅಶೋಕ ಪೂಜಾರಿ, ಸಂಜಯ ಅದಾಟೆ, ಶಿವಾನಂದ ಮಗದುಮ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 