ವಿಕ್ಟೋರಿಯಾ ಆಸ್ಪತ್ರೆಗೆ 50 ಉಚಿತ ಪರೀಕ್ಷಾ ಕಿಟ್ ವಿತರಿಸಿದ ಈಶ್ವರ್ ಖಂಡ್ರೆ

ಬೆಂಗಳೂರು, ಏ.7, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅದರ ನಿಮೂರ್ಲನೆಗೆ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರಿಂದ  ಬೆಂಗಳೂರಿನ  ವಿಕ್ಟೋರಿಯಾ ಆಸ್ಪತ್ರೆಗೆ 1 ಲಕ್ಷ ರೂ ಮೌಲ್ಯದ ಪಿಪಿಟಿ  ಕಿಟ್ ವಿತರಣೆ ಮಾಡಿದ್ದಾರೆ.ಕೋವಿಡ್- 19 ಚಿಕಿತ್ಸೆ ನೀಡುವ ವೈದ್ಯರಿಗೆ ಅವಶ್ಯವಾಗಿರುವ ಸರಿಸುಮಾರು 50 ಕಿಟ್ ಗಳನ್ನು ಖಂಡ್ರೆ ಅವರು ನೀಡಿದ್ದಾರೆ. ನಂತರ ಮಾತನಾಡಿದ ಅವರು, ಕೋವಿಡ್-19 ಯುದ್ಧದಲ್ಲಿ ವೈದ್ಯರ ಸುರಕ್ಷತೆ ಅತಿ ಮುಖ್ಯವಾದುದು. ವೈದ್ಯರು, ವೈದ್ಯಕೀಯ ಸಿಬ್ಬಂದಿ ಸುರಕ್ಷಿತವಾಗಿದ್ದರೇ ಮಾತ್ರ ಕೋವಿಡ್ ವಿರುದ್ಧದ ಸಮರದಲ್ಲಿ ಜಯ ಸಾಧಿಸಲು ಸಾಧ್ಯ ಎಂದರು.ಈಗಾಗಲೇ ಕೆಪಿಸಿಸಿ ವತಿಯಿಂದ ಕೋವಿಡ್-19 ನಿರ್ವಹಣೆ ಹಾಗೂ ಜನಸಾಮಾನ್ಯರ ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ ಎಂದರು.ಖಂಡ್ರೆ ಅವರ ಕಾರ್ಯಕ್ಕೆ ವಿಕ್ಟೋರಿಯಾ ಆಸ್ಪತ್ರೆ ಮೆಡಿಕಲ್ ಸೂಪರಿಡೆಂಟ್ ಡಾಕ್ಟರ್ ಗೀತಾ ಶಿವಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಕೆಪಿಸಿಸಿ ವೈದ್ಯರ ಘಟಕದ ಸದಸ್ಯರು ಹಾಗೂ ಬೆಂಗಳೂರಿನ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.