ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕೋವಿಡ್-19 ತುರ್ತು ಚಿಕಿತ್ಸಾ ಘಟಕ ತೆರೆಯಲು: ಈಶ್ವರ ಖಂಡ್ರೆ ಸಲಹೆ
ಬೆಂಗಳೂರು, ಮಾರ್ಚ್ 26,ಬೆಂಗಳೂರು ಹೊರವಲಯ ನೆಲಮಂಗಲ ಬಳಿಯ ಮಾದವಾರದಲ್ಲಿರುವ ವಿಶಾಲ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಪ್ರತ್ಯೇಕೀಕರಣ (ಕ್ವಾರಂಟೈನ್) ಘಟಕ ಮತ್ತು ಕೋವಿಡ್ -19 ತುರ್ತು ಚಿಕಿತ್ಸಾ ಘಟಕ ಸ್ಥಾಪಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೋನಾವೈರಸ್ (ಕೋವಿಡ್ -19) ವ್ಯಾಪಕವಾಗಿ ವಿಶ್ವಾದ್ಯಂತ ಲಕ್ಷಾಂತರ ಜನರಿಗೆ ಹಬ್ಬುತ್ತಿದ್ದು, ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿದೆ. ಸೋಂಕು ತಗುಲಿದ 3 ಮತ್ತು 4ನೇ ವಾರಗಳಲ್ಲಿ ಸೋಂಕಿತರ ಸಂಖ್ಯೆ ಅತ್ಯಂತ ವೇಗವಾಗಿ ಹಬ್ಬುತ್ತಿದೆ. ರೋಗ ಲಕ್ಷಣ ಹಲವು ದಿನಗಳ ಕಾಲ ಗೋಚರಿಸದ ಕಾರಣ, ಪ್ರಸ್ತುತ ರಾಜ್ಯದಲ್ಲಿ ಎಷ್ಟು ಸೋಂಕಿತರಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಸಿಗುತ್ತಿಲ್ಲ. ಕೆಲವು ತಜ್ಞ ವೈದ್ಯರು ಈ ಸಂಖ್ಯೆ 1 ಲಕ್ಷ ಮುಟ್ಟುವ ಭೀತಿಯನ್ನೂ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಎಲ್ಲ ಸಂಭವನೀಯ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಬೇಕು ಎಂದು ಖಂಡ್ರೆ ಒತ್ತಾಯಿಸಿದ್ದಾರೆ.ಬೆಂಗಳೂರು ನಗರದಲ್ಲಿ ಸೋಂಕು ಪೀಡಿತ ರಾಷ್ಟ್ರಗಳಿಂದ ಬಂದಿರುವವ ಸಂಖ್ಯೆ ಅಧಿಕವಾಗಿದ್ದು, ಪ್ರಕರಣಗಳ ಸಂಖ್ಯೆಯೂ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ರೋಗ ಇತರರಿಗೆ ಹರಡದಂತೆ ತಡೆಯಲು, ನೆಲಮಂಗಲ ಬಳಿ ಇರುವ 57 ಎಕರೆ ಪ್ರದೇಶದಲ್ಲಿರುವ ವಸ್ತುಪ್ರದರ್ಶನ ಕೇಂದ್ರವನ್ನು ಸಮರ್ಪಕವಾಗಿ ಬಳಸಿಕೊಂಡು, ಅಲ್ಲಿ ತುರ್ತು ಚಿಕಿತ್ಸಾ ಘಟಕ ಸ್ಥಾಪಿಸಿ, ತಜ್ಞ ವೈದ್ಯರ ಸೇವೆ, ವೆಂಟಿಲೇಟರ್, ರೋಗ ಪತ್ತೆ ಕಿಟ್, ಪ್ರಯೋಗಾಲಯ ಸೇರಿದಂತೆ ಸಕಲ ವೈದ್ಯಕೀಯ ಸೌಲಭ್ಯ ಒದಗಿಸಿದರೆ, ರೋಗಿಗಳಿಗೆ ಸೂಕ್ತ ಚಿಕಿತ್ಸೆಯೂ ಲಭಿಸುತ್ತದೆ ಜೊತೆಗೆ ಬೆಂಗಳೂರು ನಗರದಲ್ಲಿ ರೋಗ ಹರಡದಂತೆ ತಡೆಯಲೂ ಸಾಧ್ಯವಾಗುತ್ತದೆ ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ತತ್ ಕ್ಷಣವೇ ಸರ್ಕಾರ ಸಮರೋಪಾದಿಯಲ್ಲಿ ವಸ್ತು ಪ್ರದರ್ಶನ ಕೇಂದ್ರವನ್ನು ತಾತ್ಕಾಲಿಕವಾಗಿ ಕೋವಿಡ್ -19 ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 