ಸುದ್ದಿಮನೆ ಚೇತನ ಪ್ರಶಸ್ತಿಗೆ ಈಶ್ವರ ಹನಗಂಡಿ ಆಯ್ಕೆ
Ishwara Hanagandi was selected for Suddimane Chetane Award
ಮಹಾಲಿಂಗಪುರ 18: ಕಾರ್ಯನಿರತ ಪತ್ರಕರ್ತರ ಸಂಘ ಸ್ಥಳೀಯ ಘಟಕ ಹಾಗೂ ಮಧುರಾ ಪ್ರಕಾಶನ ವತಿಯಿಂದ ದಿ.ಶಾಂತವೀರಯ್ಯ ಮನ್ನಯ್ಯನವರಮಠ ಅವರ ಸ್ಮರಣಾರ್ಥ ಸುದ್ದಿಮನೆಯಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಕೊಡಮಾಡುವ ಸುದ್ದಿಮನೆ ಚೇತನ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಈಶ್ವರ ಹನಗಂಡಿ ಆಯ್ಕೆಯಾಗಿದ್ದಾರೆ.
ಕೆಎಲ್‌ಇ ಪಾಲಿಟೆಕ್ನಿಕ್‌ನಲ್ಲಿ ಆ.19 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಐ.ಕುಂದಗೋಳ ವಹಿಸುವರು. ಅನುಸೂಯಾ ಮನ್ನಯ್ಯನವರಮಠ ಗೌರವ ಉಪಸ್ಥಿತರಿರುವರು. ಅತಿಥಿಗಳಾಗಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ಧಲಬಂಜನ, ಸದಸ್ಯ ಎಸ್.ಎಸ್. ಈಶ್ವರ್ಪಗೋಳ, ಕೆಎಲ್‌ಇ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಸಂತೋಷ ಹುದ್ದಾರ, ಶ್ರೀಶೈಲ ವಜ್ಜರಮಟ್ಟಿ ಆಗಮಿಸುವರು ಎಂದು ಸಂಘದ ಕಾರ್ಯದರ್ಶಿ ಹಣಮಂತ ನಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 