ಬಾಗಲಕೋಟೆ೨೪: ಆಧುನಿಕ ಯುಗದ ಬೆಳವಣಿಗೆಯಿಂದ ಇಂದು ಮಕ್ಕಳು ಬಹುಬೇಗನೆ ದುಷ್ಚಟಗಳಿಗೆ ಬಲಿಯಾಗುತ್ತಿರುವುದನ್ನು ಕಂಡು ಜಿ.ಪಂ ಮುಖ್ಯ ಕಾರ್ಯನಿವಾಕ ಅಧಿಕಾರಿ ಗಂಗೂಬಾಯಿ ಮಾನಕರ ಅವರು ವಿಷಾದ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸವರ್ೇಲೆನ್ಸ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಕುರಿತ ಕಾರ್ಯಗಾರದಲ್ಲಿ ಮಾತನಾಡಿದ ಅವರು ಶಾಲೆಗಳಲ್ಲಿ ಓದುತ್ತಿರುವ ಚಿಕ್ಕ ವಯಸ್ಸಿನ ಮಕ್ಕಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ಸೇವನೆ ಮಾಡುತ್ತಿದ್ದಾರೆ. ಇದರಿಂದ ಜೀವಕ್ಕೆ ಅಪಾಯಕಾರಿ ರೋಗಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಸಂಗತಿ ಎಂದರು.
ಕಾನೂನು ಮೂಲಕ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಪ್ರತಿಯೊಂದು ಶಾಲೆ ಕಾಲೇಜುಗಳಲ್ಲಿನ ಮಕ್ಕಳಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕು. ಅದಕ್ಕಾಗಿಯೇ ಈ ಕಾಯರ್ಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾಯರ್ಾರದಿಂದ ಮಾಹಿತಿ ಪಡೆದುಕೊಂಡು ತಂಬಾಕುಮುಕ್ತ ಜಿಲ್ಲೆಯನ್ನಾಗಿಸಲು ಪಣ ತೊಡಲು ತಿಳಿಸಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಶಶಿಕಾಂತ ಕುಮಟಳ್ಳಿ ಮಾತನಾಡಿ ಜನರಿಗೆ ಮತ್ತು ಮಕ್ಕಳಿಗೆ ತಂಬಾಕು ಸೇವನೆಯಿಂದಾಗುವ ದುಷ್ಟಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ಪ್ರತಿ ಶಾಲೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮುಕ್ತ ನಾಮ ಫಲಕಗಳನ್ನು ಇರಿಸುವ ಮೂಲಕ ಜನರಲ್ಲಿ ಾಗೃತಿ ಮೂಡಿಸಬೇಕು ಎಂದರು.
ತಂಬಾಕು ಸೇವನೆಯಿಂದ ಬರುತ್ತಿರುವ ರೋಗಗಳ ಕುರಿತು ಒಂದು ಪ್ರಯೋಗಿಕ ವರದಿಯನ್ನು ಮಂಡಿಸುತ್ತಾ ತಂಬಾಕು ನಿಯಂತ್ರಣ ಸಮಿತಿ ರಚಿಸುವುದು, ಶಾಲೆಯ ಮುಖ್ಯ ದ್ವಾರದಬಳಿ ಕಾಂಪೌಂಡ್ ಮೇಲೆ ಎದ್ದು ಕಾಣಿವಂತಹ ಸ್ಥಳದಲ್ಲಿ ತಂಬಾಕು ಮುಕ್ತ ಶಾಲೆ ಅಥವಾ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಯೆಂದು ಫಲವನ್ನು ಹಾಕಿಸುವದು, ಎಲ್ಲಾ ಶಾಲೆಗಳಲ್ಲಿ ಎಲ್ಲ ವಿದ್ಯಾಥರ್ಿಗಳಿಗೆ ತಂಬಾಕು ಬಳಕೆ ನಿಯಂತ್ರಿಸುವ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಸುವುದು ಹಾಗೂ ರಾಜ್ಯ, ಜಿಲ್ಲೆಗಳಲ್ಲಿ ತಂಬಾಕು ನಿಯಂತ್ರಣಕ್ಕೆ ಸಂಬಂಧಿತ ತಾಂತ್ರಿಕ ಮಾಹಿತಿಗಾಗಿ ಜಿಲ್ಲೆಯ ಆರೋಗ್ಯ ಇಲಾಖೆಯ ನೋಡಲ್ ಅಧಿಕಾರಿಗಳು, ಜಿಲ್ಲಾ ಸರ್ವಕ್ಷಣಾಧಿಕಾರಿಗಳು ಹಾಗೂ ಕಾರ್ಯಕ್ರಮಧಿಕಾರಿಗಳನ್ನು ಸಂಪಕರ್ಿಸಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರಿ ಉಪನಿದರ್ೇಶಕ ಎ.ಕೆ.ಬಸಣ್ಣವರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಬಿ.ಎಚ್.ಗೊನಾಳ ಸೇರಿದಂತೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯಗುರುಗಳು ಉಪಸ್ಥಿತರಿದ್ದರು.