ಅಂಬೇಡ್ಕರ್ ಚಿಂತನೆಗಳು ಹಾಗೂ ಆದರ್ಶಗಳನ್ನು ಯುವಪೀಳಿಗೆಗೆ ಪರಿಚಯಿಸುವುದು ಕರ್ತವ್ಯ

 ಅಂಬೇಡ್ಕರ್ ಚಿಂತನೆಗಳು ಹಾಗೂ ಆದರ್ಶಗಳನ್ನು ಯುವಪೀಳಿಗೆಗೆ ಪರಿಚಯಿಸುವುದು ಕರ್ತವ್ಯ  It is a duty to introduce the thoughts and ideals of Ambedkar to the younger generation


ಬಳ್ಳಾರಿ,ಸೆ.22 : ಮುಂದಿನ ಪೀಳಿಗೆಗೆ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಚಿಂತನೆಗಳು ಹಾಗೂ ಆದರ್ಶಗಳನ್ನು ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಿಷ್ಠಿ ರುದ್ರ​‍್ಪ ಹೇಳಿದರು.  

ನಗರದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ‘ಭಾರತ ರತ್ನ ಡಾ. ಬಿ.ಆರ್‌. ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆಗಳ ಪರಿಚಯ’ ಹಾಗೂ ‘ಅಂಬೇಡ್ಕರ್ ಓದು ಮತ್ತು ವಿದ್ಯಾರ್ಥಿಗಳಿಂದ ಆಶುಭಾಷಣ ಸ್ಪರ್ಧೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಹಾಗೂ ಹಕ್ಕುಗಳನ್ನು ಕಲ್ಪಿಸುವ ಉದ್ದೇಶದಿಂದ ಡಾ. ಬಿ.ಆರ್‌. ಅಂಬೇಡ್ಕರ್ ಅವರು ಹಗಲು-ರಾತ್ರಿ ಎನ್ನದೆ ಜ್ಞಾನಾರ್ಜನೆ ಮಾಡಿ, ನಿರಂತರ ಪರಿಶ್ರಮದಿಂದ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದರು ಎಂದು ಅವರು ಹೇಳಿದರು.  

ಅಂಬೇಡ್ಕರ್ ಅವರು ಅಪಾರ ಜ್ಞಾನ ಹೊಂದಿದ್ದು, ಪುಸ್ತಕ ಓದುವ ಹವ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಸಮಾಜದ ದುರ್ಬಲ ವರ್ಗಗಳು, ಮಹಿಳೆಯರು ಹಾಗೂ ಶೋಷಿತ ಸಮುದಾಯಗಳಿಗೆ ಸಮಾನ ಹಕ್ಕು ಮತ್ತು ಅವಕಾಶಗಳು ದೊರೆಯುವಂತೆ ಸಂವಿಧಾನದ ಮೂಲಕ ಬಲಿಷ್ಠ ವ್ಯವಸ್ಥೆಯನ್ನು ರೂಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.  

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದ ಮಹತ್ವವನ್ನೂ ಅವರು ವಿವರಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಚ್‌. ವೀರಭದ್ರ​‍್ಪ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವೈಚಾರಿಕ ಚಿಂತನೆ ಹಾಗೂ ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.  

ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನ ಮಹತ್ವದ ಸ್ಥಾನ ಹೊಂದಿದೆ. ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ‘ಅಂಬೇಡ್ಕರ್ ಓದು’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಸಂತಸದ ಸಂಗತಿ ಎಂದರು.