ಪೋಕ್ಸೋ ಕಾಯ್ದೆಯ ಬಗ್ಗೆ ಮಕ್ಕಳಲ್ಲಿ ಅರಿವು ಅವಶ್ಯಕ
It is essential for children to be aware of the POCSO Act.
ಪೋಕ್ಸೋ ಕಾಯ್ದೆಯ ಬಗ್ಗೆ ಮಕ್ಕಳಲ್ಲಿ ಅರಿವು ಅವಶ್ಯಕ
ಯಲಬುರ್ಗಾ 10 : ಮಕ್ಕಳ ಮೇಲೆ ನಡೆಯುವ ಲೈಂಗಿಕ ಅಪರಾಧ, ಶೋಷಣೆ, ಅತ್ಯಾಚಾರ ಪ್ರಕರಣಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ತಡೆಗಟ್ಟುವುದು. ತಪ್ಪಿತಸ್ಥರರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು 2012 ರಲ್ಲಿ ಪೋಕೋ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ, ಕಾಯ್ದೆ ಜಾರಿಗೊಂಡು ದಶಕಗಳೇ ಕಳೆದರೂ ಅಪರಾಧ ಚಟುವಟಿಕೆ ಇನ್ನೂ ಹತೋಟಿಗೆ ಬಾರದಿರುವುದು ವಿಷಾಧಕರ ಸಂಗತಿ ಎಂದು ಹೈ ಕೋರ್ಟ್ ವಕೀಲರಾದ ಡಾ.ಸಂತೋಷಕುಮಾರ ವ್ಯಕ್ತಪಡಿಸಿದರು.ಪಟ್ಟಣದ ಶ್ರೀಧರ ಮುರಡಿ ಹಿರೇಮಠದಲ್ಲಿ ಶ್ರೀಬಸವಲಿಂಗೇಶ್ವರ ಅಕ್ಕನ ಬಳಗದಿಂದ ಹಾಗೂ ಅಂಗಳ ಸಮತೆಯ ಬದುಕಿಗಾಗಿ ಕಾನೂನು ಸಲಹಾ ಶಿಬಿರ ಕೊಪ್ಪಳ ಇವರ ಸಮ್ಮುಖದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಮಾಹಿತಿಯನ್ನು ನೀಡಲಾಯಿತು. ದೇಶ ಸಾಕಷ್ಟು ಅಭಿವೃದ್ಧಿ ಪಥದತ್ತ ಸಾಗುತ್ತಿದ್ದರೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಶೋಷಣೆ ಪ್ರಕರಣಗಳು ಮಾತ್ರ ಇನ್ನೂ ನಿಂತಿಲ್ಲ. ಪೋಕೋ ಕಾಯ್ದೆ ಬಗ್ಗೆ ಮಕ್ಕಳು, ಪೋಷಕರು, ಶಿಕ್ಷಕರಲ್ಲಿ ಸಮರ್ಕವಾಗಿ ಅರಿವಿಲ್ಲದ ಕಾರಣ ಬಹುತೇಕ ಪ್ರಕರಣಗಳು ವರದಿಯೇ ಆಗುವುದಿಲ್ಲ. ಈ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. 2019ರ ಕಾಯ್ದೆ ತಿದ್ದುಪಡಿಯಿಂದಾಗಿ ಆರೋಪಿಗಳಿಗೆ ದಂಡ ವಿಧಿಸುವುದರ ಜತೆಗೆ 10 ವರ್ಷಕ್ಕಿಂತ ಹೆಚ್ಚು ಕಠಿಣ ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಯನ್ನು ವಿಧಿಸಬಹುದಾಗಿದೆ ಎಂದು ತಿಳಿಸಿದರು.ಸಾನಿಧ್ಯವನ್ನು ಶ್ರೀಷ.ಬ್ರ ಬಸವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿಕೊಂಡು ಮಾತನಾಡಿದ ಶ್ರೀಗಳು, ಒಬ್ಬ ತಾಯಿ ಹೆಣ್ಣು ಮಕ್ಕಳನ್ನು ಹೊರಗಡೆ ಕಳಿಸಬೇಕಾದರೆ. ಯಾವ ರೀತಿ ಸಂಸ್ಕೃತಿಯನ್ನು ಕಲಿಸಬೇಕೆಂದು ಎಲ್ಲರಿಗೂ ಮನಮುಟ್ಟುವಂತೆ ಶ್ರೀಗಳು ಆಶೀರ್ವಚನವನ್ನು ನೀಡಿದರು.ನಂತರ ವಕೀಲರಾದ ಮಧು ಎಸ್ ಪಿ, ಜ್ಯೋತಿ ಹಿಟ್ನಾಳ್ ಅವರು ಮಾತನಾಡಿ, 18 ವರ್ಷದ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಆಗುವ ದೌರ್ಜನ್ಯಗಳ ಬಗ್ಗೆ. ಕಾನೂನು ಕ್ರಮಗಳನ್ನು ಹೇಗೆ ತೆಗೆದುಕೊಳ್ಳಬೇಕೆಂದು ಮಾಹಿತಿಯನ್ನು ನೀಡಿದರು.ಈ ಕಾರ್ಯಕ್ರಮದಲ್ಲಿ ಅಕ್ಕನ ಬಳಗದ ಅಧ್ಯಕ್ಷೆ ಸವಿತಾ ಮುರುಡಿಮಠ ಹಾಗೂ ಶ್ರೀ ಬಸವಲಿಂಗೇಶ್ವರ ಶಾಲೆಯ ಮುಖ್ಯೋಪಾಧ್ಯಾಯನಿ ಸುನೀತಾ ಪತಂಗರಾಯ್ ಅವರು ಮಾತನಾಡಿ, ಪೋಕ್ಸೋ ಕಾಯ್ದೆಯು ಮಕ್ಕಳನ್ನು ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯಿಂದ ರಕ್ಷಿಸುವ ಒಂದು ಪ್ರಮುಖ ಕಾನೂನು. ಈ ಕಾಯ್ದೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯ, ಇದರಿಂದ ಅವರು ತಮ್ಮ ಹಕ್ಕುಗಳನ್ನು ಅರಿತು ಸುರಕ್ಷಿತವಾಗಿರಲು ಸಹಾಯವಾಗುತ್ತದೆ. ಮಕ್ಕಳಲ್ಲಿ ಈ ಬಗ್ಗೆ ಅರಿವು ಮೂಡಿಸಲು ಶಿಕ್ಷಕರು, ಪೋಷಕರು ಮತ್ತು ಸಮಾಜದ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದರು. ಈ ವೇಳೆ ಚನ್ನಮ್ಮ ಪಾಟೀಲ್, ಜ್ಯೋತಿ ಪಲ್ಲೆದ, ರತ್ನಾ ಸ್ಟಾಂಪಿನ, ಸವಿತಾ ಓಜನಹಳ್ಳಿ, ನಾಗರತ್ನ ನೂಲುವಿ ಹಾಗೂ ಅಕ್ಕನ ಬಳಗದ ಸದಸ್ಯರು. ಸೇರಿದಂತೆ ಇನ್ನಿತರ ಎಲ್ಲಾ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 