ಮಕ್ಕಳಲ್ಲಿ ಶಿಸ್ತುಬದ್ಧ ಜೀವನದ ಅರಿವು ಮೂಡಿಸುವುದು ಅಗತ್ಯ: ಎಂ.ಬಿ. ಅಂಬಿಗೇರ
It is essential to instill an awareness of a disciplined life in children: M.B. Ambigera
ಶಿಗ್ಗಾಂವಿ, ಆ. 28: ಮಕ್ಕಳಿಗೆ ಶಿಸ್ತುಬದ್ಧ ಜೀವನ ಬಹಳ ಮುಖ್ಯವಾಗಿದ್ದು, ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಹಾಗೂ ಶಿಸ್ತನ್ನು ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಮಕ್ಕಳು ಜೀವನದಲ್ಲಿ ಶಿಸ್ತು ಹಾಗೂ ನಿಯಮಗಳನ್ನು ಪಾಲಿಸುವಂತೆ ಪೋಷಕರು ಮತ್ತು ಶಿಕ್ಷಕರು ಮಾರ್ಗದರ್ಶನ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.
ಪಟ್ಟಣದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆ ಹಾಗೂ ಮಕ್ಕಳಿಗೆ ದೀಕ್ಷಾ ಕಾರ್ಯಕ್ರಮದ ಅಂಗವಾಗಿ ಮಾತನಾಡಿದ ಅವರು, ಮಕ್ಕಳು ಶಿಸ್ತು ಮತ್ತು ಶಿಕ್ಷಣಕ್ಕೆ ಬದ್ಧರಾಗಬೇಕಾದರೆ ಇಂತಹ ವಿಶೇಷ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ತಾಲೂಕಿನ ಎಲ್ಲ ಸ್ಕೌಟ್ ಮಾಸ್ಟರ್ಗಳು ವಿದ್ಯಾರ್ಥಿಗಳನ್ನು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ಪಠ್ಯದ ಜತೆಗೆ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳು ಮಕ್ಕಳ ಸಮಗ್ರ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು.
ಗೀತಗಾಯನ ಸ್ಪರ್ಧೆಯಲ್ಲಿ ಶಾಲೆಗೆ ಕೀರ್ತಿ
ಗೀತಗಾಯನ ಸ್ಪರ್ಧೆಯಲ್ಲಿ ಪಟ್ಟಣದ ಶಾಲೆಯ ಪ್ರೀತಿಲತಾ ಗೈಡ್ ಕಂಪನಿ ಪ್ರಥಮ ಸ್ಥಾನ, ನೈಟಿಂಗೇಲ್ ಫ್ಲಾಕ್ ಪ್ರಥಮ ಸ್ಥಾನ, ನೇತಾಜಿ ಸುಭಾಷ್ ಚಂದ್ರ ಬೋಸ್ ಕಬ್ ಪ್ಯಾಕ್ ದ್ವಿತೀಯ ಸ್ಥಾನ ಹಾಗೂ ಸರ್ವಜ್ಞ ಸ್ಕೌಟ್ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದರು. ದೀಕ್ಷಾ ಹಾಗೂ ಗೀತಗಾಯನ ಸ್ಪರ್ಧೆಗೆ ಶಿಕ್ಷಕಿಯರಾದ ದಿವ್ಯಶ್ರೀ ಹಾಗೂ ದೀಕ್ಷಾ ಅಚ್ಚುಕಟ್ಟಾಗಿ ಮಾರ್ಗದರ್ಶನ ನೀಡಿ, ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 