ಬೆಳಗಾವಿ 25: ಸಾಮಾಜಿಕ ಮೋಸ ಜಾಲಗಳ ಬಗ್ಗೆ ಹೆಣ್ಣು ಮಕ್ಕಳಿಗೆ ತಿಳುವಳಿಕೆ ನೀಡುವುದು ಅಗತ್ಯವಿದ್ದು, ಮಕ್ಕಳು ನಮ್ಮ ಸಮಾಜದ ಹೊಸ ಚಿಗುರು ಇದ್ದಂತೆ ಅವರಿಗೆ ಒಳ್ಳೆಯ ಶಿಕ್ಷಣ, ಆಹಾರ, ಸಂಸ್ಕಾರ ಎಲ್ಲವನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕರಾದ ಕಮಲಾ ಬಸರಗಿ ಅವರು ಹೇಳಿದರು.
ಬೆಂಗಳೂರು ಬಾಲ ಭವನ ಸೊಸೈಟಿ, ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಪಂಚಾಯತ ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳಗಾವಿ ತಾಲ್ಲೂಕು ಬಾಲ ಭವನ ಸಮಿತಿ, ಶಿಶು ಅಭಿವೃದ್ಧಿ ಯೋಜನೆ ಅವರ ಸಂಯುಕ್ತಾಶ್ರಯದಲ್ಲಿ ವಂಟಮೂರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ನಡೆದ ಸ್ಪಧರ್ೆಗಳ ವಿಜೇತರಿಗೆ ಪ್ರಶಸ್ತಿ ನೀಡುವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಮಕ್ಕಳು ಮೊಬೈಲ ವ್ಯಾಮೋಹಕ್ಕೆ ಒಳಗಾಗುತ್ತಿದ್ದು, ಇದರಿಂದ ಮಕ್ಕಳಲ್ಲಿನ ಪ್ರತಿಭೆ ಕುಂಟಿತಗೊಳ್ಳುತ್ತಿದೆ ಎಂದು ಹೇಳಿದರು.
ರವಿ ಕುಮಾರ ನಾಯಕ ಮಾತನಾಡಿ, ಮಕ್ಕಳು ನಾವು ಹೇಳಿದಂತೆ ಮಾಡುವುದಿಲ್ಲ ಬದಲಾಗಿ ನಾವು ಮಾಡಿದಂತೆ ನಮ್ಮನ್ನು ಅನುಕರಣೆ ಮಾಡುತ್ತಾರೆ ಹಾಗಾಗಿ ಅವರಿಗೆ ಹೇಳುವ ಮೊದಲು ಪೋಷಕರು ಬದಲಾಗಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಗುರುಗಳಾದ ಕೋಲ್ಕರ್, ಶಿಕ್ಷಕರಾದ ಸುನಂದಾ ಪಾಟೀಲ, ಗಾಯತ್ರಿ ಕಡಬೂರ, ಕೆ.ಆರ್.ಎಸ್.ಎಸ್ ಅಧ್ಯಕ್ಷರಾದ ಈಶ್ವರ ಪಟ್ಟಣಶೆಟ್ಟಿ, ಹಾಗೂ ಶಿಕ್ಷಕವೃಂದ ಉಪಸ್ಥಿತರಿದ್ದರು.