ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ
It is everyone's responsibility to provide facilities to government schools
ಹಾನಗಲ್ 08: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಕಲಿತ ಶಾಲೆಯತ್ತ ಒಮ್ಮೆ ತಿರುಗಿ ನೋಡಿ, ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಮೂಡಬೇಕಿದೆ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ಆರಂಭಿಸಲಾದ 50:50 ಯೋಜನೆ ರಾಜ್ಯದ ಗಮನ ಸೆಳೆದಿದ್ದು ನೂರಕ್ಕಿಂತ ಹೆಚ್ಚು ಶಾಲೆಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಇನಾಂದ್ಯಾಮನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 44 ಸಾವಿರ ರೂ. ವೆಚ್ಚದಲ್ಲಿ ಕಂಪ್ಯೂಟರ್ ಪ್ರಿಂಟರ್, ಪ್ಲಾಸ್ಟಿಕ್ ಕುರ್ಚಿಗಳು, ಆಫೀಸ್ ಅಲ್ಮೇರಾ, ಕಂಪ್ಯೂಟರ್ ಟೇಬಲ್ ಸೇರಿದಂತೆ ನಾನಾ ಸಾಮಗ್ರಿಗಳನ್ನು ವಿತರಿಸಿದ ಅವರು ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವ ಕಾರ್ಯಕ್ರಮ ಘೋಷಿಸಲಾಗಿತ್ತು. ಶಾಲೆಗಳಿಗೆ ಬೇಕಿರುವ ಸೌಲಭ್ಯಗಳನ್ನು ಪಟ್ಟಿ ಮಾಡಿ ತಗಲುವ ವೆಚ್ಚದಲ್ಲಿ ಶೇ. 50 ರಷ್ಟು ಹಣವನ್ನು ಸ್ಥಳೀಯವಾಗಿ ಸಂಗ್ರಹಿಸಿದರೆ ಉಳಿದ ಶೇ. 50 ರಷ್ಟು ಹಣವನ್ನು ಭರಿಸಿ ಸೌಲಭ್ಯ ಕಲ್ಪಿಸುವ ಯೋಜನೆ ಸಾಫಲ್ಯ ಕಂಡಿದೆ.
ಶಾಲೆಗಳಿಗೆ ಕಂಪ್ಯೂಟರ್, ಲ್ಯಾಪಟಾಪ್, ಡೆಸ್ಕ್, ಅಲ್ಮೆರಾ, ಕುರ್ಚಿ, ಇತರ ಪೀಠೋಪಕರಣ ಒದಗಿಸಲಾಗಿದೆ. ಕೆಲವೆಡೆ ಕಲಾಭವನ ಸಹ ನಿರ್ಮಿಸಲಾಗಿದೆ. ನಮ್ಮ ತಾಲೂಕಿನಲ್ಲಿ ಯಶ ಕಂಡ ಈ ಯೋಜನೆಯನ್ನು ಗಮನಿಸಿ ಶಿಕ್ಷಣ ಇಲಾಖೆ ಹಳೆ ಬೇರು, ಹೊಸ ಚಿಗುರು ಎನ್ನುವ ಕಾರ್ಯಕ್ರಮ ರೂಪಿಸಿದೆ ಎಂದು ತಿಳಿಸಿದ ಶಾಸಕ ಮಾನೆ, ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ತರುವ ಪ್ರಯತ್ನ ಮಾಡಲಾಗಿದೆ. ಹಲವು ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಅನೇಕ ಸ್ಥಳಗಳಲ್ಲಿ ಪ್ರೌಢಶಾಲೆ ಆರಂಭಿಸಲಾಗಿದೆ. ಆಂಗ್ಲ ಮಾಧ್ಯಮ, ಎಲ್‌ಕೆಜಿ, ಯುಕೆಜಿ ತರಗತಿ ಆರಂಭಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಚನ್ನವೀರಯ್ಯ ಹಿರೇಮಠ, ಮಂಜುನಾಥ ಕುದರಿ, ಶಿವಾನಂದ ಬೇವಿನಹಳ್ಳಿ, ಎಸ್‌ಡಿಎಂಸಿ ಅಧ್ಯಕ್ಷ ಶಿವಾನಂದ ಕುದರಿ, ಬಸನಗೌಡ ಪಾಟೀಲ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 