ಮೂಲಭೂತ ಸೌಲಭ್ಯಗಳಿದ್ದಲ್ಲಿ ಉನ್ನತ ಕ್ರೀಡಾ ಸ್ಪರ್ಧೆ ಆಯೋಜಿಸಲು ಸಹಾಯಕಾರಿ: ಜಿಲ್ಲಾ ಪಂಚಾಯತ ಅಧ್ಯಕ್ಷ ಸಿದ್ದಲಿಂಗೇಶ್ವರ

ಗದಗ 22: ಗದಗನಲ್ಲಿ ಕ್ರೀಡೆಗಳಿಗೆ ಉತ್ತಮ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿದ್ದರಿಂದ ಉನ್ನತ ಶ್ರೇಣಿಯ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲು ಸಹಾಯಕಾರಿಯಾಗಿದೆ ಎಂದು ಗದಗ ಜಿಲ್ಲಾ ಪಂಚಾಯತ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ ನುಡಿದರು.

     ಗದುಗಿನ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಸಕ್ತಸಾಲಿನ ದಸರಾ ಕ್ರೀಡಾಕೂಟದ ಬೆಳಗಾವಿ ವಿಬಾಗ ಮಟ್ಟದ ಕುಸ್ತಿ ಪಂದ್ಯಾವಳಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಕ್ರೀಡಾಂಗಣ ಸಮಿತಿ ಈ ಕ್ರೀಡಾಕೂಟದ ಸಿದ್ದತೆಗೆ ಅಗತ್ಯದ  ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಕ್ರೀಡಾಳುಗಳು ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಜಿ.ಪಂ.ಅಧ್ಯಕ್ಷರು ನುಡಿದರು.

     ರಾಜ್ಯ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ ಸದೃಢ ದೇಹ ಹಾಗೂ ಸದೃಡ ಮನಸ್ಸಿಗೂ ಕ್ರೀಡೆ ಅವಶ್ಯಕವಿದ್ದು ಕ್ರೀಡಾ ಸ್ಫೂರ್ತಿಯಿಂದ ಆಟವಾಡಿ ತಮ್ಮ ಕ್ರೀಡಾ ಪ್ರತಿಭೆ ಮತ್ತು ಸಾಮಥ್ರ್ಯ ಪ್ರದರ್ಶನಕ್ಕೆ ಸಕರ್ಾರ ಒದಗಿಸಇರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. 

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಬಿ.ವಿಶ್ವನಾಥ ಪ್ರಾಸ್ತಾವಿಕವಾಗಿ ಮಾತನಾಡಿ ಬೆಳಗಾವಿ ವಿಭಾಗದ 7 ಜಿಲ್ಲೆಗಳ 86 ಪುರುಷರು, 24 ಮಹಿಳಾ ಕುಸ್ತಿಪಟುಗಳು ಭಾಗವಹಿಸಿದ್ದಾರೆ ಎಂದರು. ಕ್ರೀಡಾಕೂಟದ ನಿರ್ಣಾಯಕರಾಗಿ ಕುಸ್ತಿ ತರಬೇತುದಾರರಾದ ಶ್ರೀನಿವಾಸಗೌಡ, ಶಂಕರಪ್ಪ, ಮಂಜುನಾಥ್, ನಾಗರಾಜ, ಶರಣಗೌಡ ಬೇಲೇರಿ, ಸತ್ಯಪ್ಪ ನಾಯಕ, ಕಾರ್ಯನಿರ್ವಹಿಸುವರು. ಸಹಾಯಕ ಯುವ ಜನ ಸೇವಾ ಮತ್ತು ಕ್ರೀಡಾಧಿಕಾರಿಗಳಾದ ಎಂ.ಎಸ್. ಕುಚಬಾಳ, ಎಂ. ಡಿ. ತಳ್ಳಳ್ಳಿ, ಎಲ್.ಬಿ. ಹುಡೇದ ಹಾಗೂ ಕುಸ್ತಿ ಕ್ರೀಡಾಪಟುಗಳು ಸಮಾರಂಭದಲ್ಲಿದ್ದರು.