ಮಕ್ಕಳಿಗೆ ನಿತ್ಯ ದೈಹಿಕ ಚಟುವಟಿಕೆ ಮಾಡಿಸುವುದು ಅಗತ್ಯ: ಉಡುಪಿಕರ
It is important for children to be physically active on a daily basis: Udupikar
ವಿಜಯಪುರ 16: ಮಕ್ಕಳಿಗೆ ನಿತ್ಯ ದೈಹಿಕ ಚಟುವಟಿಕೆ ಮಾಡಿಸುವುದರಿಂದ ದೈಹಿಕ ಮತ್ತು ಮಾನಸಿಕ ವಿಕಸನಕ್ಕೆ ಸಹಕಾರಿಯಾಗಿದೆ ಎಂದ ಅವರು ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಯೋಗಾಸನ ಪ್ರಾಣಾಯಾಮ ಕಬಡ್ಡಿ ಮತ್ತು ಗುಂಪು ಚಟುವಟಿಕೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಪಾಲ್ಗೊಳ್ಳುವಂತೆ ದೈಹಿಕ ಶಿಕ್ಷಕರು ಪ್ರೇರಣೆ ನೀಡುವುದು ಅವಶ್ಯವಾಗಿದೆ ಹಾಗಾದಾಗ ಮಾತ್ರ ಭವಿಷ್ಯದಲ್ಲಿ ರಾಜ್ಯ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ವಕೀಲರಾದ ಪ್ರಕಾಶ ಉಡುಪಿಕರ ಅಭಿಪ್ರಾಯ ಪಟ್ಟರು.
ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕ್ರೀಡಾ ಸಾಮಗ್ರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಡಳಿತ ಮಂಡಳಿಯ ಉಪಾಧ್ಯಕ್ಷ ಕೆ ಜಿ ದೇಶಪಾಂಡೆ ಸದಸ್ಯರಾದ ವಿಶಾಲ ದರಬಾರ, ಆದಿತ್ಯ ದರಬಾರ, ಸಮನ್ವಯ ಅಧಿಕಾರಿ ಡಾ. ವಿ ಬಿ ಗ್ರಾಮ ಪುರೋಹಿತ, ಪಾರಥ ದರಬಾರ, ಪ್ರಧಾನ ಗುರುಮಾತೆ ರೂಪಾ ತೋಳ, ಮುಖ್ಯೋಪಾಧ್ಯಾಯ ರಮೇಶ ಕೋಟ್ಯಾಳ, ಜಿ.ಎಚ್.ಮಣೂರ, ಟಿ.ಆರ್.ಕುಲಕರ್ಣಿ, ಸತೀಶ ಕುಲಕರ್ಣಿ ಉಪಸ್ಥಿತರಿದ್ದರು.
ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 