ಸೆಕ್ಷನ್ 377 ಕುರಿತು ಇಂದು ತೀಪರ್ು ಪ್ರಕಟ ಸಾಧ್ಯತೆ
ನವದೆಹಲಿ 05: ಬಹು ನಿರೀಕ್ಷಿತ, ಭಾರತದಲ್ಲಿ ಸಲಿಂಗ ಕಾಮ ಅಪರಾಧ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್ 377ರ ಸಾಂವಿಧಾನಿಕ ಮಾನ್ಯತೆ ಕುರಿತು ಸುಪ್ರೀಂ ಕೋಟರ್್ ನಾಳೆ ತೀಪರ್ು ಪ್ರಕಟಿಸುವ ಸಾಧ್ಯತೆ ಇದೆ.
ಇಬ್ಬರು ವಯಸ್ಕರು ಸಮ್ಮತಿಯಿಂದ ನಡೆಸುವ ಲೈಂಗಿಕ ಕ್ರಿಯೆಯನ್ನು ಅಪರಾಧವಲ್ಲ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅಜರ್ಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂತರ್ಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ, ಕಳೆದ ಜುಲೈ 17 ರಂದು ತೀಪರ್ು ಕಾಯ್ದಿರಿಸಿದೆ.
ಕೇಂದ್ರ ಸಕರ್ಾರ ಸೆಕ್ಷನ್ 377ರ ರದ್ದತಿ ವಿಚಾರವನ್ನು ನ್ಯಾಯಾಲಯದ ವಿವೇಚನೆಗೆ ಬಿಡುವುದಾಗಿ ಹೇಳಿದೆ. ಆದರೆ, ಸಲಿಂಗ ವಿವಾಹ ಮತ್ತು ಕೆಲವು ಹಕ್ಕುಗಳ ವಿಚಾರದಲ್ಲಿ ಗೊಂದಲ ಉಂಟಾಗಬಹುದು ಎಂಬ ಕಳವಳವನ್ನು ಸಕರ್ಾರ ವ್ಯಕ್ತಪಡಿಸಿತ್ತು.
ಈ ಹಿಂದೆ ಅಂದರೆ 2009ರಲ್ಲಿ ದೆಹಲಿ ಹೈಕೋಟರ್್ ಸಲಿಂಗಕಾಮವು ಅಪರಾಧವಲ್ಲ ಎಂದು ತೀಪು ನೀಡಿತ್ತು. ಆದರೆ, 2014ರಲ್ಲಿ ಸುಪ್ರೀಂ ಕೋಟರ್್ ದೆಹಲ್ಲಿ ಹೈಕೋಟರ್್ ತೀರ್ಪನ್ನು ವಜಾ ಮಾಡಿ, ಸಲಿಂಗಕಾಮವನ್ನು ಅಪರಾಧ ವೆಂದು ಘೋಷಿಸಿತ್ತು. ನಂತರ, ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋಟರ್್ಗೆ ಐವರು ಅಜರ್ಿ ಸಲ್ಲಿಸಿದ್ದು, ನಾಳೆ ತೀಪು ಪ್ರಕಟವಾಗುವ ಸಾಧ್ಯತೆ ಇದೆ.
ಐಪಿಸಿ ಸೆಕ್ಷನ್ 377 ಹೇಳುವುದೇನು?
ಯಾವುದೇ ಪುರುಷ, ಮಹಿಳೆ ಅಥವಾ ಪ್ರಾಣಿಯೊಂದಿಗೆ ಯಾರಾದರೂ ನಿಸರ್ಗಕ್ಕೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆಸಿದರೆ, ಅದು ಅಪರಾಧವಾಗಿದ್ದು, ಅಂಥ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷಗಳ ಜೈಲು ಹಾಗೂ ದಂಡ ವಿಧಿಸ ಬಹುದು ಎಂದು ಈ ಸೆಕ್ಷನ್ ಹೇಳುತ್ತದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 