ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವುದು ಅಗತ್ಯ
It is necessary to create awareness about democratic values
ಲೋಕದರ್ಶನ ವರದಿ
ಗೋಕಾಕ 16: ನಗರದ ಜೆ.ಎಸ್.ಎಸ್. ಪದವಿ ಮಹಾವಿದ್ಯಾಲಯದಲ್ಲಿ ಇಐಅ, ಙಖಅ ಹಾಗೂ ಓಖಖ ಘಟಕಗಳ ಆಶ್ರಯದಲ್ಲಿ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ.ಎಂ. ತುರಡಗಿ ಮಾತನಾಡಿ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಹಿನ್ನೆಲೆ ಹಾಗೂ ಮಹತ್ವವನ್ನು ವಿವರಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳು, ಮಾನವ ಹಕ್ಕುಗಳು, ಸಮಾನತೆ, ಸಾಮಾಜಿಕ ಜವಾಬ್ದಾರಿ ಹಾಗೂ ನಾಗರಿಕ ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಯುವ ರೆಡ್ಕ್ರಾಸ್ ಘಟಕಗಳ ಕಾರ್ಯಕ್ರಮಾಧಿಕಾರಿಗಳಾದ ಡಾ. ಚಿದಾನಂದ ಮಸರಗುಪ್ಪಿ ಹಾಗೂ ಎಂ.ವಿ. ಗೊರಗುಡ್ಡಿ ಉಪಸ್ಥಿತರಿದ್ದರು.
ಡಾ. ಕೃಷ್ಣಮೂರ್ತಿ ಎಂ.ಎಸ್. ಕಾರ್ಯಕ್ರಮದ ಸ್ವಾಗತ ಹಾಗೂ ನಿರೂಪಣೆ ನೆರವೇರಿಸಿದರು. ಎಂ.ವಿ. ಗೊರಗುಡ್ಡಿ ವಂದನಾರೆ್ಣ ಮಾಡಿದರು. ಮಹಾವಿದ್ಯಾಲಯದ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 