ವಿದ್ಯಾರ್ಥಿಗಳಲ್ಲಿ ಕ್ಯಾನ್ಸರ್ ಜಾಗೃತಿ ಮೂಡಿಸುವದು ಅವಶ್ಯವಿದೆ: ಡಾ.ಉಮೇಶ ಹಳ್ಳಿಕೇರಿ
It is necessary to create cancer awareness among students: Dr. Umesh Hallikeri
ಧಾರವಾಡ : ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಕೂಡ ಒಂದು. ಪುಟ್ಟ ಮಕ್ಕಳನ್ನು ಬಿಡದ ಈ ಮಹಾಮಾರಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಅವಶ್ಯವಿದೆ. ಮಕ್ಕಳು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕೆಂದು ಹುಬ್ಬಳ್ಳಿಯ ಕರ್ನಾಟಕ ಕ್ಯಾನ್ಸರ್ ಚಿಕಿತ್ಸೆ ಮತ್ತು ಸಂಶೋಧನ ಸಂಸ್ಥೆಯ ತಜ್ಞ ಡಾ.ಉಮೇಶ ಹಳ್ಳಿಕೇರಿ ಹೇಳಿದರು.
ಧಾರವಾಡ ಲಯನ್ಸ್ ಸಂಸ್ಥೆಯು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಿಸಮ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಕ್ಯಾನ್ಸರ್ ಯಾವಾಗಲೂ ಮಾರಣಾಂತಿಕ ಕಾಯಿಲೆಯಲ್ಲ. ಇದನ್ನು ನಿರ್ವಹಿಸಲು ಸಾಧ್ಯವಿದೆ.ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿದರೆ ಸೂಕ್ತ ಚಿಕಿತ್ಸೆ ನೀಡಬಹುದೆಂದು ಅವರು ಹೇಳಿದರು.
ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಡಾ.ಮಹಾಂತೇಶ ವೀರಾಪುರ ಮಾತನಾಡಿದರು. ಲಯನ್ಸ್ ಅಧ್ಯಕ್ಷ ಅಶ್ವಿನ್ ಕೊಪ್ಪಿಕರ ಅಧ್ಯಕ್ಷತೆ ವಹಿಸಿದ್ದರು.
ಶ್ರೀನಿವಾಸ ತಿಮ್ಮನಗೌಡರ, ಶೈಲಾ ಕರಗುದರಿ, ಹರ್ಷ ದೇಸಾಯಿ, ಶ್ರೀಕಾಂತ ದೇವಗಿರಿ, ಹರ್ಷ ಡಂಬಳ, ಮುಕುಂದ ಹೆಬ್ಲಿಕರ, ರಶ್ಮೀ ಭಾರದ್ವಾಜ್, ಡಾ. ಎಸ್.ಜಿ.ಹಿರೇಮಠ, ಪ್ರೊ. ವೀಣಾ ತಿಮ್ಮನಗೌಡರ, ಎಂ.ಬಿ.ಕಣಗಿನಹಾಳ, ವೈ.ಎಮ್.ಮಾಸ್ತಿ ಮತ್ತು ಸಿಬ್ಬಂದಿ ಹಾಜರಿದ್ದರು. 168 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಲಯನ್ಸ್ ಅಧ್ಯಕ್ಷ ಅಶ್ವಿನ್ ಕೊಪ್ಪಿಕರ ಸ್ವಾಗತಿಸಿದರು. ಡಾ.ರಾಜಶ್ರೀ ಗುದಗನವರ ನಿರೂಪಿಸಿದರು. ಲಯನ್ಸ್ ಕಾರ್ಯದರ್ಶಿ ಪ್ರೊ.ಸುರೇಶ ಗುದಗನವರ ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 