ಸಂವಿಧಾನದ ಮೌಲ್ಯವನ್ನು ತಿಳಿದುಕೊಳ್ಳುವುದು ಅವಶ್ಯಕ: ಕರಿಸಣ್ಣವರ
It is necessary to understand the value of the Constitution: Karisannavara
ಲೋಕದರ್ಶನ ವರದಿ
ಹಾವೇರಿ 27: ನಗರದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೆಡ್ ಕ್ರಾಸ್ ಮತ್ತು ರಾಜ್ಯಶಾಸ್ತ್ರ ವಿಭಾಗಗಳ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ್ದ ಬಸವರಾಜ ಎಂ ಕರಿಸಣ್ಣವರ ಮಾತನಾಡಿ ಸಂವಿಧಾನ ಅರಿತುಕೊಳ್ಳವುದು ಮತ್ತು ಅದರ ಮೌಲ್ಯವನ್ನು ತಿಳಿದುಕೊಳ್ಳುವುದು ಅವಶ್ಯಕ ಹಾಗೂ ದೇಶದ ಸರ್ವೋದ್ಧಾರಕ್ಕೆ ಸಮಾಜವನ್ನು ಪುನಶ್ಚೇತನಗೊಳಿಸಲು ಬೇರೆ ಯಾವ ದೇಶದ ಸಂವಿಧಾನವು ಒತ್ತು ನೀಡಿಲ್ಲ ಆದರೆ ನಮ್ಮ ಸಂವಿಧಾನವು ಸರ್ವರಂಗದಲ್ಲೂ ಒಂದು ಮಹತ್ವದ ಮೈಲುಗಲ್ಲಾಗಿದೆ ಮತ್ತು ಸಂವಿಧಾನದ ರಚನೆಯಲ್ಲಿ ಅಂಬೇಡ್ಕರವರ ಪಾತ್ರ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಸವಿತಾ ಎಸ್. ಹಿರೇಮಠ ಮಾತನಾಡಿ “ಪ್ರಸ್ತುತ ಸಮಾಜದಲ್ಲಿ ಸಂವಿಧಾನದ ಮಹತ್ವ ಮತ್ತು ಅರಿವು” ಅವಶ್ಯವಾಗಿದೆ.ಈನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಸಂವಿಧಾನದ ಸಂಪೂರ್ಣ ಮಾಹಿತಿ ಅರಿತುಕೊಳ್ಳವುದು ಮಹತ್ವದ್ದಾಗಿದೆ ಎಂದರು.
ನೇತ್ರಾ ತಳವಾರ ಪ್ರಾರ್ಥಿಸಿದಳು. ಎಂ.ಎಂ.ಮಡಿವಾಳರ ಸ್ವಾಗತಿಸಿದರು. ನಾಗರಾಜ ಎಂ ಹೆಚ್ ಪ್ರಾಸ್ತಾವಿಕ ಮಾತನಾಡಿದರು. ಎಸ್.ಎ ಸೈಯದ ಸಂವಿಧಾನದ ಪೂರ್ವ ಪೀಠಿಕೆ ಬೋಧಿಸಿದರು. ಚಂದ್ರಕಲಾ ನಾಗನೂರ ವಂದಿಸಿದಳು. ಭಾಗ್ಯ ದಂಡಿನ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಬಿ.ವಿ,ಹಿರೇಮಠ, ಎಸ್.ಎಸ್.ಮುಂಡಾಸದ ಮತ್ತು ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 