ಅಪ್ಪಾಜಿ ನಾಡಗೌಡ ಅವರಿಗೆ ಸಚಿವ ಸ್ಥಾನ ಸಿಗಬೇಕಾದದ್ದು ನ್ಯಾಯಯುತ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ
It is only fair that Appaji Nadagowda should get a ministerial berth: KPCC President Hariprasad
ಮುದ್ದೇಬಿಹಾಳ 26 : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅಪ್ಪಾಜಿ ನಾಡಗೌಡ ಅವರು ಸುಮಾರು ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದು, ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದ ಗುಣವಂತ ಅಜಾತಶತ್ರು ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಹೈಕಮಾಂಡ್ನ ಎಲ್ಲ ನಿರ್ಧಾರಗಳನ್ನು ಗೌರವಿಸುತ್ತಾ ಶಿಸ್ತಿನ ಸಿಪಾಯಿಯಾಗಿ ಕಾರ್ಯನಿರ್ವಹಿಸಿರುವ ಅವರ ಸೇವೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಅಭಿಪ್ರಾಯ ಒತ್ತಾಯಿಸಲಾಗಿದೆ.
ಶುಕ್ರವಾರ ಸುಮಾರು 600ಕ್ಕೂ ಹೆಚ್ಚು ಜನರ ನಿಯೋಗವು ಬೆಂಗಳೂರಿನ ಕೆಪಿಸಿಸಿ ಕಾರ್ಯಾಲಯಕ್ಕೆ ತೆರಳಿ ಪಕ್ಷದ ರಾಜ್ಯಾಧ್ಯಕ್ಷರಿಗೆ ಒತ್ತಾಯಿಸಿದ ನಿಯೋಗವು, ಜನತಾದಳ ಪಕ್ಷದ ಭದ್ರಕೋಟಿಯಾಗಿದ್ದ ಮುದ್ದೇಬಿಹಾಳ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆಯನ್ನಾಗಿ ಪರಿವರ್ತಿಸುವಲ್ಲಿ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರ ಪಾತ್ರ ಮಹತ್ವದ್ದಾಗಿದೆ ಎಂದು ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರೆಂಟಿ ಯೋಜನೆ ಸಮೀತಿ ತಾಲೂಕಾಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಅಪ್ಪಾಜಿ ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಅವರ ಸುದೀರ್ಘ ಸೇವೆಗೆ ನ್ಯಾಯ ಒದಗಿಸಬೇಕು.
ಅಪ್ಪಾಜಿ ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡಿದರೆ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿದ್ದು, ಕ್ಷೇತ್ರವು ಮುಂದೆಯೂ ಪಕ್ಷದ ಭದ್ರಕೋಟೆಯಾಗಿ ಉಳಿಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.ನಾಡಗೌಡ ಅವರಿಗೆ ಸಚಿವ ಸ್ಥಾನ ನ್ಯಾಯಯುತವಾಗಿದೆ: ಕೆಪಿಸಿಸಿ ರಾಜ್ಯಾಧ್ಯಕ್ಷ ಹರಿಪ್ರಸಾದ ಮುದ್ದೇಬಿಹಾಳ ಕ್ಷೇತ್ರದಿಂದ ನಿಯೋಗದೊಂದಿಗೆ ತೆರಳಿದ್ದ ನೂರಾರು ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಸ್ವಾಗತಿಸಿದ ನೂತನ ಕೆಪಿಸಿಸಿ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ, ವಿಜಯಪುರ ಜಿಲ್ಲೆಯಲ್ಲಿ ಬಹುತೇಕ ಎಲ್ಲರೂ ಹಿರಿಯ ರಾಜಕಾರಣಿಗಳೇ ಇದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 