ಮಕ್ಕಳನ್ನು ಸಮಾಜಮುಖಿಯಾಗಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ನೀಲಣ್ಣವರ
It is our duty to raise children socially-oriented: Nilannavara
ಲೋಕದರ್ಶನ ವರದಿ
ಬೆಳಗಾವಿ 24: ಮಕ್ಕಳು ದೇಶದ ಭವಿಷ್ಯ. ಅವರನ್ನು ಸಮಾಜಮುಖಿಯಾಗಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ನಾವು ನಮ್ಮ ನಡೆ-ನುಡಿಗಳನ್ನು ಸರಿಪಡಿಸಿಕೊಂಡರೆ ಮಕ್ಕಳು ಸಹ ಅದನ್ನೇ ಅನುಸರಿಸುತ್ತಾರೆ. ಸಣ್ಣ ವಿಷಯಗಳಿಗೆ ಕಲಹಗಳನ್ನು ತಪ್ಪಿಸಿ, ಪ್ರೀತಿ ಮತ್ತು ವಾತ್ಸಲ್ಯದಿಂದ ಮಕ್ಕಳನ್ನು ಬೆಳೆಸಬೇಕು ಎಂದು ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ನೀಲಣ್ಣವರ ಅವರು ಹೇಳಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಹಿಳಾ ಕಲ್ಯಾಣ ಸಂಸ್ಥೆ, ಬೆಳಗಾವಿ ವತಿಯಿಂದ ತೊಟ್ಟಿಲು ಮನೆಗಳ ಮಕ್ಕಳ ವಾರ್ಷಿಕೋತ್ಸವ ಕಾರ್ಯಕ್ರಮವು ಸೋಮವಾರ ನಗರದ ಲೋಕಮಾನ್ಯ ಟಿಳಕ ರಂಗಮಂದಿರದಲ್ಲಿ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಚೇತನ ಕುಮಾರ ಎಂ.ಎನ್. ಅವರು ಮಾತನಾಡಿ, ಮಕ್ಕಳು ಹಸಿ ಮಣ್ಣಿನಂತೆ, ಅವರಿಗೆ ನೀಡುವ ಮಾರ್ಗದರ್ಶನವೇ ಅವರ ಭವಿಷ್ಯ ರೂಪಿಸುತ್ತದೆ. ಪೋಷಕರು ಮಕ್ಕಳ ಕನಸುಗಳಿಗೆ ಬೆಂಬಲ ನೀಡಿದರೆ ಅವರು ಜೀವನದಲ್ಲಿ ಸಾಧನೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು. ತೊಟ್ಟಿಲು ಮನೆ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂಬ ಉದ್ದೇಶದಿಂದ ಶಿವಾನಂದ ನೀಲಣ್ಣವರ ಅವರು ಎಲ್ಲಾ ಮಕ್ಕಳಿಗೆ ಶಾಲಾ ಬ್ಯಾಗಗಳನ್ನು ವಿತರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಅಪ್ಪಣ್ಣ ಹೆಗಡೆ, ಅಧಿಕಾರಿ ಕಾಂಚನಾ ಅಮಠೇ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಪರ್ವಿನ್, ನಗರ ಸಿ.ಡಿ.ಪಿ.ಓ. ಕೆ.ವಿ. ರಾಮಮೂರ್ತಿ, ಗ್ರಾಮೀಣ ಸಿ.ಡಿ.ಪಿ.ಓ. ವಿಕ್ರಮ, ಮಹಿಳಾ ಕಲ್ಯಾಣ ಸಂಸ್ಥೆಯ ಸಂಸ್ಥಾಪಕ ಎಂ. ಎಸ್. ಚೌಗಲಾ, ಆಡಳಿತ ಮಂಡಳಿ ಅಧ್ಯಕ್ಷೆ ಸರೋಜಿನಿ ಪಾಟೀಲ, ಸದಸ್ಯೆ ನೇತ್ರಾವತಿ ರಾಮಾಪೂರೆ, ಗೌರವ ಕಾರ್ಯದರ್ಶಿ ವೈಜಯಂತಿ ಎಂ. ಚೌಗಲಾ, ಕಿರಣ್ ಚೌಗಲಾ, ಯೋಜನಾ ನಿರ್ದೇಶಕಿ ಸುರೇಖಾ ಪಾಟೀಲ್ ಸೇರಿದಂತೆ ಸಿಬ್ಬಂದಿ, ಶಿಕ್ಷಕಿಯರು, ಸಹಾಯಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಆರ್.ಜೆ. ಮೀರಾ ಮತ್ತು ಆರ್.ಜೆ. ಚೇತನ್ ನಿರೂಪಿಸಿದರು. ಸಂಸ್ಥೆಯ ಸಂಸ್ಥಾಪಕ ಎಂ. ಎಸ್. ಚೌಗಲಾ ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 