ಶಿಕ್ಷಣ ವ್ಯವಸ್ಥೆ ಯಿಂದ ಅಸಮಾನತೆ ದೂರ ಮಾಡಲು ಸಾದ್ಯ
It is possible to remove inequality from the education system
ಲೋಕದರ್ಶನ ವರದಿ
ಹೂವಿನ ಹಡಗಲಿ 28: ಶಿಕ್ಷಣ ನೀತಿ ಮತ್ತು ಸಮಾನ ಅವಕಾಶಗಳಿಂದ ಕಲ್ಯಾಣ ಕರ್ನಾಟಕಕ್ಕೆ ಮೊದಲ ಆದ್ಯತೆ ಜತೆಗೆ ಆರ್ಥಿಕ, ಸಾಮಾಜಿಕ ಅಸಮಾನತೆ ದೂರ ಮಾಡಲು ಸಾಧ್ಯವಾಗುತ್ತದೆ ಎಂದು ಬಳ್ಳಾರಿ ಶ್ರೀ ಕೃಷ್ಣ ದೇವರಾಯ ವಿವಿಯ ಕುಲಪತಿ ಎಂ.ಮುನಿರಾಜು ಹೇಳಿದರು.ಪಟ್ಟಣದ ಜಿಬಿಆರ್ದವಿ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನೆ ವಿಚಾರ ಸಂಕಿರಣದಲ್ಲಿ ಸ್ಮರಣ ಸಂಚಿಕೆ ಲೋಕಾರೆ್ಣ ಮಾಡಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮೊದಲು ಶಿಕ್ಷಣಕ್ಕೆ ಆದ್ಯತೆಯ ಜತೆಗೆ ಕೈಗಾರಿಕೆ, ಮೂಲಭೂತ ಸೌಕರ್ಯ, ತಾಂತ್ರಿಕ, ಕೌಶಲ್ಯ ಆಧಾರಿತ ಶಿಕ್ಷಣ ನೀಡುವ ಮೂಲಕ ಈ ಭಾಗದ ಅಸಮತೋಲನ ತೊಲಗಿಸಬೇಕಿದೆ ಎಂದರು.
ವೀವಿ ಸಂಘದ ಕಾರ್ಯದರ್ಶಿ ಡಾ.ಅರವಿಂದ ಪಾಟೀಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಾನವನ ಅಭಿವೃದ್ಧಿ ಗೆವೀವಿ ಸಂಘ ಶತಮಾನದಿಂದ ಬಡ ಮಕ್ಕಳಿಗೆ ಅಕ್ಷರ ದಾಸೋಹ ನಿರಂತರ ಮಾಡುತ್ತಿದೆ ಜತೆಗೆ ಪ್ರಾದೇಶಿಕ ಅಸಮತೋಲನೆ ನಿವಾರಣೆಯ ಕೆಲಸ ಮಾಡುತ್ತಿದೆ. ಈ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಹೊಸದಾಗಿ ವಿವಿಧ ಕೋರ್ಸ್ ಗಳನ್ನು ಆರಂಭಿಸಲಾಗಿದೆ ಎಂದರು.
ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸದಸ್ಯ ಡಾ.ಎಸ್.ಟಿ.ಬಾಗಲಕೋಟೆ, ರಾಜ್ಯ ಯೋಜನಾ ಆಯೋಗದ ಸದಸ್ಯೆ ಡಾ.ಸಂಗೀತಾ ಕಟ್ಟಿಮನಿ, ಪ್ರಾಚಾರ್ಯ ಎಸ್.ಎಸ್.ಪಾಟೀಲ್ ಮಾತನಾಡಿದರು.ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷಸಿ.ಮೋಹನರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಕೆ.ಎಂ.ಉದಾಸಿ, ಎಂ.ಮಲ್ಲಿಕಾರ್ಜುನ, ಸೊಪ್ಪಿನ ಪ್ರಕಾಶ, ಕೆ.ಪ್ರಕಾಶ, ಕೊಟ್ಟೂರು ಕಾಲೇಜು ಪ್ರಾಚಾರ್ಯ ರವಿಕುಮಾರ್ಇದ್ದರು.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 