ಗುಣಾತ್ಮಕ ಚರ್ಚೆಗಳ ಮೂಲಕ ಸದನ ಗೌರವ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ

ಗುಣಾತ್ಮಕ ಚರ್ಚೆಗಳ ಮೂಲಕ ಸದನ ಗೌರವ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯ It is the duty of all of us to uphold the honor of the House through quality debates

ವಿಧಾನ ಸಭೆ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು 

ಬೆಳಗಾವಿ ಸುವರ್ಣ ವಿಧಾನಸೌಧ ಡಿ. 09 :  ವಿಧಾನ ಮಂಡಲದ ಅಧಿವೇಶನದಲ್ಲಿ ಗುಣಾತ್ಮಕ ಚರ್ಚೆಗಳು ನಡೆಯದೆ ಕಾಲಹರಣವಾಗುತ್ತಿದೆ ಎಂಬ ಭಾವನೆ ರಾಜ್ಯದ ಸಾರ್ವಜನಿಕರಲ್ಲಿ ಮೂಡಿದೆ. ಗುಣಾತ್ಮಕ ಚರ್ಚೆಗಳ ಮೂಲಕ ಸದನ ಗೌರವ ಎತ್ತಿ ಹಿಡಿಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭೆ ಸದಸ್ಯರಿಗೆ ಕಿವಿಮಾತು ಹೇಳಿದರು.  

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಂಗಳವಾರ ಉತ್ತರ ಕರ್ನಾಟಕ ಚರ್ಚೆ ವೇಳೆ ಉಂಟಾದ ಗದ್ದಲದಿಂದಾಗಿ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದ ಪ್ರಸಂಗ ಎದುರಾಯಿತು. ನಂತರ ಸಮಾವೇಶಗೊಂಡ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.  

ಸಂಸದೀಯ ವ್ಯವಸ್ಥೆಯಲ್ಲಿ ಸರ್ಕಾರ ಹಾಗೂ ಪ್ರತಿಪಕ್ಷಗಳ ಕೊಡುಕೊಳ್ಳುವಿಕೆ ಸಹಜವಾದುದ್ದು. ಸಭಾನಾಯಕರು ಹಾಗೂ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಇತರೆ ಸದಸ್ಯರು ಅಡ್ಡಿ ಪಡಿಸಬಾರದು. ಚರ್ಚೆಯ ವೇಳೆ ಅಸಂಸದೀಯ ಪದಗಳನ್ನು ಯಾರು ಬಳಸಬಾರದು. ವಿರೋಧ ಪಕ್ಷಗಳಿಗೆ ಸರ್ಕಾರವನ್ನು ಟೀಕಿಸುವ ಹಕ್ಕಿದೆ. ವಾಸ್ತವದ ತಹಳದಿಯ ಮೇಲೆ ಟೀಕೆ ಮಾಡಬೇಕು. ಸದನದಲ್ಲಿ ಅಸತ್ಯ ಹೇಳಬಾರದು. ಸುಳ್ಳು ಅಂಕಿ ಅಂಶಗಳನ್ನು ನೀಡುವ ಮೂಲಕ ಸದನ ಹಾದಿ ತಪ್ಪಿಸಬಾರದು. ವಿರೋಧ ಪಕ್ಷದ ಟೀಕೆಗಳಿಗೆ ಉತ್ತರ ನೀಡಲು ಸರ್ಕಾರ ಸಮರ್ಥವಾಗಿದೆ. ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಸಂಯುಮ ಸಂಯಮ ಪಾಲಿಸುವುದು ಉತ್ತಮ. ಇದರಿಂದ ಚರ್ಚೆಗಳ ಗುಣಮಟ್ಟ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.