ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ: ಗುಡಿ

ಹಾವೇರಿ30:  ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು  ಎಂದು  ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ.ಆರ್. ಗುಡಿ ಅವರು ಹೇಳಿದರು.

ನಗರದ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನೆ ಇಲಾಖೆ ಹಾಗೂ ನಗರಸಭೆ ಸಯೋಗಹದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಪ್ರಯುಕ್ತ ಜರುಗಿದ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

       ಕೇವಲ ನಮ್ಮ ಮನೆಗಳನ್ನು ಸ್ವಚ್ಛವಾಗಿಟ್ಟರೆ ಸಾಲದು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು.  ಕಲುಷಿತ ವಾತಾವರಣದಿಂದ ಅನೇಕ ರೋಗರುಜಿನಗಳು ಹರಡುತ್ತವೆ. ಆದ್ದರಿಂದ ನಮ್ಮ ಸುತ್ತಲಿನ ಪರಿಸರವನ್ನು ಹಾಗೂ ಸಾರ್ವಜನಿಕ ಸ್ಥಳಗಳನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ ಸುಂದರ ಪರಿಸರ ನಿಮರ್ಾಣಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದಶರ್ಿಗಳಾದ ಶ್ರೀಮತಿ ಕೆ.ಶ್ರೀವಿದ್ಯಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿ ಕಂಡುಬರುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಪರಿಸಕ್ಕೆ ಹೆಚ್ಚಿನ ಅಪಾಯವಾಗಿದೆ. ಸಾರ್ವಜನಿಕರು ಬಟ್ಟೆ ಚೀಲಗಳನ್ನು ಬಳಸುವ ಮೂಲಕ ಪ್ಲಾಸ್ಟಿಕ್ ಬಳಕೆ ಕಡಿಮೆಮಾಡಬೇಕು.  ಅಡಿಕೆ-ಎಲೆ, ಗುಟಕಾ ಜಗಿದು ಎಲ್ಲೆಂದರಲ್ಲಿ ಉಗಿಯುವುದರಿಂದ  ಅನೈರ್ಮಲ್ಯ ಉಂಟಾಗುವುದರ ಜೊತೆಗೆ ರೋಗರುಜಿನಗಳು ಹರಡಲು ಕಾರಣವಾಗುತ್ತದೆ.   ಸಾರ್ವಜನಿಕ ಸ್ಥಳಗಳನ್ನು  ಶುಚಿಯಾಗಿಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಸಿ. ಪಾವಲಿ ಅವರು ಮಾತನಾಡಿ,  ಬಸ್ ನಿಲ್ದಾಣ, ರೈಲು ನಿಲ್ದಾಣ, ದೇವಸ್ಥಾನ, ಸಾರ್ವಜನಿಕ ಉದ್ಯಾನವನಗಳು ಸಾರ್ವಜನಿಕ ಆಸ್ತಿಗಳಾಗಿದ್ದು, ಇವುಗಳ ಸ್ವಚ್ಛತೆಗೆ  ಹೆಚ್ಚಿನ ಆದ್ಯತೆ ನೀಡಬೇಕು. ನಮ್ಮ ಮನೆ ಸ್ವಚ್ಛತೆಗೆ ನೀಡುವಷ್ಟೆ ಆದ್ಯತೆ ನೀಡಬೇಕು. ಸ್ವಚ್ಛ ಹಾಗೂ ನಿರ್ಮಲ ಪರಿಸರಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗರಾಜ ನಾಯಕ, ನಗರಸಭೆಯ ಸಹಾಯಕ ನಿವರ್ಾಹಕರಾದ ಎನ್.ಆರ್.ರಾಯ್ಕರ್, ಎನ್.ಡಬ್ಲೂ.ಕೆ.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ.ಎನ್, ವಕೀಲರು, ಪುರಸಭೆ ಸಿಬ್ಬಂದಿಗಳು ಇತರರು  ಉಪಸ್ಥಿತರಿದ್ದರು.