ಸಾಧಕರನ್ನು ಗೌರವಿಸುವುದು ಸಮಾಜದ ಜವಾಬ್ದಾರಿ: ಶಾಸಕ ನಾಡಗೌಡ
It is the responsibility of society to respect achievers: MLA Nadagowda
ತಾಳಿಕೋಟಿ 17: ಸಮಾಜದ ಹಿತಕ್ಕಾಗಿ ತಮ್ಮನ್ನು ಅರ್ಿಸಿಕೊಂಡು ಸೇವೆಯನ್ನು ಮಾಡುತ್ತಿರುವ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಸಮಾಜದಿಂದಾಗಬೇಕು ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ ಹೇಳಿದರು.
ಪಟ್ಟಣದ ಟಿಪ್ಪು ನಗರದ ಆವರಣದಲ್ಲಿ ಡಾ.ಎಪಿಜೆ ಅಬ್ದುಲ್ ಕಲಾಂ ಪೌಂಡೇಶನ್ ಇದರ 9 ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಫೌಂಡೇಶನ್ ದ ಪದಾಧಿಕಾರಿಗಳು ಮಾಡುವ ಕಾರ್ಯಗಳು ಶ್ಲಾಘನೀಯವಾಗಿವೆ ಇದಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ ಎಂದರು. ಪುರಸಭೆ ಮಾಜಿ ಸದಸ್ಯ ಪ್ರಭುಗೌಡ ಮದರ್ಕಲ್ ಹಾಗೂ ಮುಸ್ಲಿಂ ಬ್ಯಾಂಕ್ ನಿರ್ದೇಶಕ ಇಬ್ರಾಹಿಂ ಮನ್ಸೂರ್ ಮಾತನಾಡಿ ಫೌಂಡೇಶನ್ ಅಧ್ಯಕ್ಷ ಶಪೀಕ ಇನಾಮದಾರ ಅವರು ಜಾತ್ಯತೀತವಾಗಿ ಎಲ್ಲ ಸಮುದಾಯದವರ ಜೊತೆ ಸೇರಿ ನಿಸ್ವಾರ್ಥ ಭಾವನೆಯಿಂದ ಕೆಲಸ ಮಾಡುತ್ತಿದ್ದಾರೆ ಅವರಿಗೆ ನಾವೆಲ್ಲರೂ ಸಹಕರಿಸೊಣ ಎಂದರು.
ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ ಸಮಾರಂಭದ ಸಾನಿಧ್ಯ ವಹಿಸಿದ್ದರು. ಫೌಂಡೇಶನ್ ಅಧ್ಯಕ್ಷ ಮೊಹಮ್ಮದ್ ಶಫೀಕ ಇನಾಮದಾರ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡ ಸಿದ್ದನಗೌಡ ಪಾಟೀಲ(ನಾವವಗಿ), ಸಂಗನಗೌಡ ಲಿಂಗದಳ್ಳಿ,ಸಂಗನಗೌಡ ಅಸ್ಕಿ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹಿಬೂಬ ಕೆಂಭಾವಿ, ನಿರ್ದೇಶಕ ಆದಮಸಾಬ ಅತ್ತಾರ,ಮಹೆಬೂಬ ಖಾದ್ರಿ, ಮಹಲ್ ಗಲ್ಲಿ ಅಧ್ಯಕ್ಷ ಹಸನಸಾಬ ಕೊರ್ಕಿ, ಕೃಷಿ ಅಧಿಕಾರಿ ಮಹೇಶ ಜೋಶಿ, ಅಬ್ದುಲ್ ರಜಾಕ್ ಮನಗೂಳಿ, ಶಾಸಕರ ಆಪ್ತ ಕಾರ್ಯದರ್ಶಿ ಬಾಗೇವಾಡಿ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ಚೋರಗಸ್ತಿ, ಮೋದಿನಸಾ ನಗಾರ್ಚಿ, ನಾಸೀರಹುಸೇನ ಇನಾಮದಾರ, ಮೌ.ಮೊಹಮ್ಮದ್ ಯೂಸುಫ್ ಡೋಣಿ, ಕಾರ್ಯದರ್ಶಿ ಪೀರಮಹಮದ್ ಖಾಜಿ, ಅಬ್ಬಾಸಲಿ ನೀರಲಗಿ,ಶೌಕತ್ ಲಾಹೋರಿ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಆಸೀಫ ಕೆಂಭಾವಿ, ಸಚೀನ ಎಚ್.ಪಾಟೀಲ, ಮಹಾಂತೇಶ ಮುರಾಳ, ಸೈಯದ್ ಇರ್ಫಾನ್ ಖಾಜಿ, ಮೊಹಮ್ಮದ್ ಅಶ್ಫಾಕ್ ನಮಾಜಕಟ್ಟಿ,ಜಾವೀದ ಕೆಂಭಾವಿ,ಗುಲಾಮ ಡೋಣಿ,ಯಾಸೀನ ಮಕಾಂದಾರ, ಹನೀಫ ಜಮಾದಾರ, ಫೌಂಡೇಶನ್ ಪದಾಧಿಕಾರಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 