ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವದು ಶಿಕ್ಷಕರ ಜವಾಬ್ದಾರಿ : ಶಾಸಕ ಪಠಾಣ

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವದು ಶಿಕ್ಷಕರ ಜವಾಬ್ದಾರಿ : ಶಾಸಕ ಪಠಾಣ It is the responsibility of teachers to shape the future of students in a competitive era: MLA Patha

ಶಿಗ್ಗಾವಿ 07  : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ತಮ್ಮ ಜವಾಬ್ದಾರಿಯನ್ನು ಸಮರ​‍್ಕವಾಗಿ ನಿಭಾಯಿಸಿ ಮಕ್ಕಳ ಭವಿಷ್ಯವನ್ನು ರೂಪಿಸಬೇಕು ಎಂದು ಶಾಸಕ ಯಾಸೀರಖಾನ್ ಪಠಾಣ ಹೇಳಿದರು. 

ಪಟ್ಟಣದ ವಿರಕ್ತಮಠದ ಸಂಗನಬಸವ ಕಲ್ಯಾಣ ಮಂಟಪದಲ್ಲಿ, ಶಾಲಾ ಶಿಕ್ಷಣ ಇಲಾಖೆ ಹಾವೇರಿ, ತಾಲೂಕ ಪಂಚಾಯತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿಕ್ಷಕರ ದಿನಾಚರಣೆ ಸಮಿತಿ ಶಿಗ್ಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ 137 ನೇ ಜನ್ಮ ದಿನಾಚರಣೆಯ ನಿಮಿತ್ತ ನಡೆದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಇಂದಿನ ವೇಗದ ಜಗತ್ತಿನಲ್ಲಿ, ಭಾರತದ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ, ದೇಶದ ಭವಿಷ್ಯವನ್ನು ಬದಲಾಯಿಸುವಂತಹ ವಿದ್ಯಾರ್ಥಿಗಳನ್ನು ಸೃಷ್ಟಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಹೀಗಾಗಿ ದೇಶದ ಸಮಗ್ರ ಬದಲಾವಣೆಗೆ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.ವಿರಕ್ತ ಮಠದ ಸಂಗನಬಸವ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗುವ ಮೂಲಕ ನೈತಿಕತೆಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಶಿಕ್ಷಕರು ತಮ್ಮ ಪಠ್ಯ ಶಿಕ್ಷಣ ಜೊತೆಗೆ ನೈತಿಕತೆಯ ಬೋಧನೆ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮುಂದಾಗಬೇಕು ಎಂದು ಹೇಳಿದರು.ಸಾಹಿತಿ ಶ್ರೀಕಾಂತ ಹುಲ್ಮನಿ ಉಪನ್ಯಾಸ ನೀಡಿದರು. ಬಿಇಒ. ಎಂ ಬಿ ಅಂಬಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಮತ್ತು ನಿವೃತ್ತ ತಾಲೂಕಿನ ಹಿರಿಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ ಯಲ್ಲಪ್ಪ ಗೋಣೆಣ್ಣವರ, ಇಓ. ಮಂಜುನಾಥ ಸಾಳೊಂಕಿ, ಗ್ಯಾರೆಂಟಿ ಸಮಿತಿ ತಾಲೂಕ ಅಧ್ಯಕ್ಷ ಶೇಖಪ್ಪ ಮಣಕಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಬಿ.ಶ್ರೀನಿವಾಸ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ ಹುಡೆದಗೌಡ್ರ, ಕ್ಷೇತ್ರ ಸಮನ್ವಯಾಧಿಕಾರಿ ಗೀತಾಂಜಲಿ ತೆಪ್ಪದ, ಶಬ್ಬೀರ್ ಮನಿಯಾರ, ಎಪ್ ಸಿ ಕಾಡಪ್ಪಗೌಡ್ರ, ಗೌಸಖಾನ ಮುನಶಿ, ಮಂಜುನಾಥ ಮನ್ನಣ್ಣವರ, ಸುಧೀರ ಲಮಾಣಿ, ಮಾಲತೇಶ ಸಾಲಿ ಸೇರಿದಂತೆ ಇತರರಿದ್ದರು.ಕಸಾಪ ತಾಲೂಕು ಅಧ್ಯಕ್ಷ ನಾಗಪ್ಪ ಬೆಂತೂರ ಮತ್ತು ಅದುದುಲ್ಲಾ ರಟ್ಟಿಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.