ನಮ್ಮ ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವುದು ಶೋಚನೀಯ: ಶಂಭು ಬಳಿಗಾರ
It is unfortunate that our folk culture is disappearing: Shambhu Baligar
ರಾಯಬಾಗ 31: ಪ್ರತಿಯೊಬ್ಬರು ತಮ್ಮ ಕುಟುಂಬದೊಂದಿಗೆ ಪ್ರೀತಿಯಿಂದ ಸಹಬಾಳ್ವೆ ಮಾಡಬೇಕೆಂದು ನಮ್ಮ ಜನಪದ ಸಾಹಿತ್ಯ ಹೇಳುತ್ತದೆ ಎಂದು ಜನಪದ ಸಾಹಿತಿ ಶಂಭು ಬಳಿಗಾರ ಹೇಳಿದರು.ಸೋಮವಾರ ರಾತ್ರಿ ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ 39ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಜನಪದ ಜಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಶ್ಚಾತ್ಯ ಸಂಸ್ಕೃತಿಯಿಂದ ಇಂದು ದೊಡ್ಡ ದೊಡ್ಡ ನಗರಗಳಲ್ಲಿ ನಮ್ಮ ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವುದು ಅತ್ಯಂತ ಶೋಚನೀಯ ಎಂದರು. ನಮ್ಮ ಜೀವನ ಅಲ್ಪಮಯವಾಗಿದ್ದು, ಸಂಸ್ಕಾರಯುತ ಒಳ್ಳೆಯ ನೆಮ್ಮದಿಯ ಜೀವನ ನಡೆಸಬೇಕೆಂದರು.ಹಂಚಿನಾಳ ಭಕ್ತಿಯೋಗಾಶ್ರಮದ ಮಹೇಶಾನಂದ ಸ್ವಾಮಿಜೀ ಪ್ರವಚನ ನೀಡಿದರು. ವೀರಭದ್ರೇಶ್ವರ ಸ್ವಾಮಿಜೀ ಸಾನಿಧ್ಯ ವಹಿಸಿದ್ದರು.
ಬೆಳವಿ ಸಿದ್ದಾರೂಢ ಮಠದ ಮೃತ್ಯುಂಜಯ ಸ್ವಾಮಿಜೀ, ಶಿವಗೌಡ ಪಾಟೀಲ ಹಾಗೂ ಭಕ್ತಾದಿಗಳು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 