ಹೆಣ್ಣು ಮಕ್ಕಳು ದೈಹಿಕವಾಗಿ ಸಬಲರಾಗಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ

ಹೆಣ್ಣು ಮಕ್ಕಳು ದೈಹಿಕವಾಗಿ ಸಬಲರಾಗಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕ It is very important for girls to be physically strong and maintain their health


ವಿಜಯಪುರ  10: ಹೆಣ್ಣು ಮಕ್ಕಳು ದೈಹಿಕವಾಗಿ ಸಬಲರಾಗಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.  ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಬಾಟ್ ಇಂಡಿಯಾ ಐಟಿಡಿ ವಿಜಯಪುರ, ಮತ್ತು ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ ಹಾಗೂ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಥೈರಾಯಿಡ್ ತನಿಖಾ ಪರೀಕ್ಷಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಹಾಗೂ ನಿಯಮಿತ ವ್ಯಾಯಾಮದ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯದ ಕುರಿತು ಜಾಗೃತಿ ಹೆಚ್ಚಾಗುತ್ತದೆ ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಯೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಆಯುಷ್ಮಾನ್ ಭಾರತ ಯೋಜನೆ ಹಾಗೂ ಏಂಜಲ್ ಕಾರ್ಡ್‌ (ಕೇಂದ್ರ ಬ್ಯಾಂಕ್) ಮುಂತಾದ ಸೌಲಭ್ಯಗಳನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು. 

ಕಾರ್ಯಕ್ರಮದಲ್ಲಿ   ವಿಜಯಪುರದ ಅಬಾಟ್ ಇಂಡಿಯಾ ಐಟಿಡಿ ಥೆರಫಿ ಬಿಜಿನೆಸ್ ವ್ಯವಸ್ಥಾಪಕ ರಾಮಕೃಷ್ಣ ಡಗೆ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪುಷ್ಪಾ ಹಿರೇಮಠ, ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ತಹಮೀನಾ ಕೋಲಾರ್, ಸ್ನಾತಕ ಮತ್ತು ಸ್ನಾತಕೋತರ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಭೋದಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ.ಜ್ಯೋತಿ ಎ. ಉಪಾಧ್ಯೆ ಸ್ವಾಗತಿಸಿ ನಿರೂಪಿಸಿದರು.