ಸಮ್ಮಿಶ್ರ ಸಕರ್ಾರ ನಡೆಸೋದು ತುಂಬಾ ಕಷ್ಟ: ಡಿಸಿಎಂ
ತುಮಕೂರು 09: ಸಮ್ಮಿಶ್ರ ಸರಕಾರ ನಡೆಸುವುದು ಕಠಿಣ ತುಂಬಾ ಕಷ್ಟದ ಕೆಲಸ. ಆದರೂ ರಾಜ್ಯದ ಜನರ ಒಳಿತಿಗಾಗಿ ನೋವುಗಳನ್ನು ನುಂಗಿಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.
ಮಾಧ್ಯಮವೊಂದರ ವರದಿಯಂತೆ, ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ 76ನೇ ವಷರ್ಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಪರಮೇಶ್ವರ ಅವರು, ಸಕರ್ಾರ ರಚನೆಯ ವೇಳೆಯಲ್ಲಿ ಜೆಡಿಎಸ್ ಗೆ ನಾವು ರಾಜಕೀಯವಾಗಿ ಷರತ್ತು ಹಾಕಿಲ್ಲ. ನಮ್ಮ ಕಾಂಗ್ರೆಸ್ ಸಕರ್ಾರ ಬಡವರಿಗಾಗಿ ರೂಪಿಸಿರುವ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಶಾದಿ ಭಾಗ್ಯ ಅಂತಹ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಬೇಕೆಂಬ ಆಂತರಿಕ ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೂ ಸಮ್ಮಿಶ್ರ ಸಕರ್ಾರ ನಡೆಸೋದು ಕಠಿಣ. ರಾಜ್ಯದ ಆಡಳಿತದ ದೃಷ್ಟಿಯಿಂದ ಎಲ್ಲವನ್ನು ಸಹಿಸಿಕೊಂಡು ಸಕರ್ಾರ ನಡೆಸುತ್ತಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಆರ್ಎಸ್ಎಸ್ ವಿರುದ್ಧ ಕಿಡಿಕಾರಿದ ಪರಮೇಶ್ವರ ಅವರು, ಆರ್ಎಸ್ಎಸ್ ನವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿಲ್ಲ. ಹಾಗಾಗಿ ಅವರಿಗೆ ಕ್ವಿಟ್ ಇಂಡಿಯಾ ಚಳವಳಿ ಗೊತ್ತೆ ಇಲ್ಲ. ಅಂತಹವರು ಕಾಂಗ್ರೆಸ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ.ಆರ್ ಎಸ್ಎಸ್ನವರು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿಲ್ಲ ಅನ್ನೋದಕ್ಕೆ ನಮ್ಮಲ್ಲಿ ಪುರಾವೆಗಳಿವೆ. ಸ್ವಾತಂತ್ರ್ಯದ ಅರಿವಿಲ್ಲದವರು ಇಂದು ನಮ್ಮ ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
ಅಂತೆಯೇ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ. ನಮ್ಮ ಪಕ್ಷದ ಅಡಿಯಲ್ಲೇ ಸ್ಥಳೀಯ ಸಂಸ್ಥೆಯ ಚುನಾವಣೆ ಎದುರಿಸುತ್ತೇವೆ ಎಂದೂ ಪರಮೇಶ್ವರ್ ಸ್ಪಷ್ಟಪಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 