ಉಡುಪಿ, ಮೇ 23, ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ ಐವರಲ್ಲಿ ಕೊರೋನ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.ಮುಂಬೈಯಿಂದ ಆಗಮಿಸಿದ ನಾಲ್ವರು ಮತ್ತು ವಿದೇಶದಿಂದ ಆಗಮಿಸಿದ ಓರ್ವ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.ಮೂವರು ಪುರುಷರು ಇಬ್ಬರು ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ.ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಒಟ್ಟು ಸಂಖ್ಯೆ 55ಕ್ಕೆ ಏರಿಕೆಯಾಗಿದೆ.