2028ಕ್ಕೆ ರಾಜ್ಯದಲ್ಲಿ ಜೆಸಿಬಿ ಸರ್ಕಾರ ಅಧಿಕಾರಕ್ಕೆ: ಯತ್ನಾಳ್
JCB government to come to power in the state by 2028: Yatnal
ಲೋಕದರ್ಶನ ವರದಿ
ಇಂಡಿ 27 : ತಾಲ್ಲೂಕಿನ ಸುಕ್ಷೇತ್ರ ಬೊಳೇಗಾಂವ ಗ್ರಾಮದ ಮಾರುತೇಶ್ವರ ನೂತನ ದೇವಸ್ಥಾನದ ವಾಸ್ತುಶಾಂತಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾಹೋಹಣ ಕಾರ್ಯಕ್ರಮದ ನಿಮಿತ್ತವಾಗಿ ಬಸವ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಭಿವೃದ್ಧಿ ಕೆಲಸ ಮಾಡಿದೆ ಕಾಲ ಹರಣ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರದ ಮೇಲೆ ಜನಂಬಿಕೆ ಕಡಿಮೆ ಆಗಿದೆ.2028 ಕ್ಕೆ ಜೆಸಿಬಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ನಿಶ್ಚಿತ ಎಂದು ವಿಜಯಪೂರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ಹಾಗೆ ವಾಗ್ದಾಳಿ ಮುಂದುವರಿಸಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಸರ್ಕಾರ ನೀರಾವರಿ ಯೋಜನೆಯ ಜಾರಿಗೆ ತರಲು ತುಂಬಾ ವಿಫಲವಾಗಿದೆ. ಸರ್ಕಾರಕ್ಕೆ ಎಷ್ಟೇ ಸಾಲವಾದರೂ ಪರವಾಗಿ ಕಾಲ ಮಿತಿಯಲ್ಲಿ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು. ಭೂಮಿ ಕಳೆದುಕೊಂಡ ರೈತರಿಗೆ ಹಾಗೂ ನಿರಾಶ್ರಿತರಿಗೆ ಏಕ ಕಾಲದಲ್ಲಿ ಸೂಕ್ತ ಪರಿಹಾರ ನೀಡಬೇಕು.ಹಾಗೂ ಇಂಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ ಇಂಡಿ ಶಾಸಕರು ಐದು ಸಾವಿರ ಕೋಟಿ ರೂಪಾಯಿ ಅನುದಾನ ತಂದಿದ್ದೆನೆ ಎಂದು ಭಾಷಣ ಬೀಗಿಯುತ್ತಾರೆ. ಐದು ಸಾವಿರ ಕೋಟಿ ರೂಪಾಯಿ ಅನುದಾನ ಎಲ್ಲಿ ಹೋಗಿದೆ ಎಂದು ? ಇಂಡಿ ಶಾಸಕರ ಹೆಸರು ಹೇಳದೇ ಶಾಸಕರನ್ನು ಕುಟುಕಿದರು.
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಬಗ್ಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸಿನ ಒಬ್ಬ ಶಾಸಕ ಮೊದಲು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಪಂಚಮಸಾಲಿ ಸಮಾಜಕ್ಕೆ 2ಂ ಮೀಸಲಾತಿ ಕಲ್ಪಿಸುವುದಾಗಿ ಹೇಳಿ ಈಗ ತಮ್ಮ ಹಾಗೂ ಹೆಂಡತಿಯರಿಗೆ ಮತ್ತು ಮಕ್ಕಳಿಗೆ ಋಐ ಟೀಕೆಟ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹುನಗುಂದ ಶಾಸಕರ ಹೆಸರು ಹೇಳದೇ ಅವರನ್ನು ಟೀಕಿಸಿದರು.ಈ ಸಂದರ್ಭದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಮಾಹಾಸ್ವಾಮಿಗಳು ತಮ್ಮ ಆರ್ಶಿವಚನ ನೀಡಿ ಮಾತನಾಡಿ ಅವರು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಹೋರಾಟದ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿ ನಿರ್ಧಾರ ಕೈಗೊಳ್ಳಲಾಗುವುದು.
ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಹಾಗೂ ಸಮಾಜದ ಒಳಿತಿಗಾಗಿ ನಾನು ಸದಾ ಸಿದ್ಧ. ಹಾಗೂ ಬೊಳೇಗಾಂವ ಗ್ರಾಮದ ಜನರು ಕೂಡಾ ಬಾಳ ಭಕ್ತಿ ಜೀವಿಗಳು ಯಾವ ರಾಜಕಾರಣಿಗಳಿಗೆ ಕೈ ಒಡ್ಡದೆ ಗ್ರಾಮಸ್ಥರು ಕೂಡಿ ಹಿಂತಾ ಸಣ್ಣ ಗ್ರಾಮದಲ್ಲಿ ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಮಾರುತೇಶ್ವರ ನೂತನ ದೇವಸ್ಥಾನವನ್ನು ಕಟ್ಟಿ ಇಡೀ ರಾಜ್ಯಕ್ಕೆ ಮಾದರಿ ಆಗಿದಿರಿ ನಿಮ್ಮ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಇಂಡಿ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ವಿ ಎಚ್ ಬಿರಾದಾರ, ಹಾಗೂ ಜಗದೇಶ ಕ್ಷೇತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದಕ್ಕೂ ಮುಂಚೆ ಹಿರೇರೂಗಿ ಗ್ರಾಮದಿಂದ ಬೊಳೇಗಾಂವ ಗ್ರಾಮದ ವರಿಗೆ ಸಾವಿರಾರು ಬಸನಗೌಡ ಪಾಟೀಲ್ ಯತ್ನಾಳ್ ಅಭಿಮಾನಿಗಳು ಬೈಕ್ ರಾಲಿ ಮುಖಾಂತರ ಬಸನಗೌಡ ಪಾಟೀಲ್ ಯತ್ನಾಳ್ ವೇದಿಕೆವರೆಗೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಕಾರ್ಯಕ್ರಮವನ್ನು ಶಿಕ್ಷಕರಾದ ಆನಂದ ಮೋರೆ ನಿರೂಪಿಸಿದರು. ಬಿ ಟಿ ತಳವಾರ ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 