ಆ.31 ರಂದು ಜೆಡಿಎಸ್ನಿಂದ ಧರ್ಮಸ್ಥಳ ಸತ್ಯ ಯಾತ್ರೆ: ತನಿಖೆ ಎನ್‌ಐಎಗೆ ವಹಿಸಲು ಅಗ್ರಹ
JDS' Dharmasthala Satya Yatra on August 31: Demand to hand over investigation to NIA
ಆ.31 ರಂದು ಜೆಡಿಎಸ್ನಿಂದ ಧರ್ಮಸ್ಥಳ ಸತ್ಯ ಯಾತ್ರೆ: ತನಿಖೆ ಎನ್‌ಐಎಗೆ ವಹಿಸಲು ಅಗ್ರಹ
ಕೊಪ್ಪಳ 29: ಜಾತಿ, ಧರ್ಮ, ಪಕ್ಷ ಎಲ್ಲವನ್ನು ಮೀರಿ ರಾಜ್ಯದ ಸಮಸ್ಥ ಜನತೆ ಪೂಜಿಸುವ ಧರ್ಮಸ್ಥಳದ ಶ್ರದ್ದಾ ಕೇಂದ್ರದ ಬಗ್ಗೆ ಕೆಲವು ಕಾಣದ ಕೈಗಳು ಅಪಪ್ರಚಾರ ನಡೆಸುತ್ತಿರುವುದು ಜೆಡಿಎಸ್ ಪಕ್ಷ ತೀವ್ರವಾಗಿ ಖಂಡಿಸುತ್ತಿದೆ. ಪವಿತ್ರ ತೀರ್ಥ ಕ್ಷೇತ್ರದ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಜೆಡಿಎಸ್ ಪಕ್ಷದಿಂದ ಆ.31 ರಂದು ಧರ್ಮಸ್ಥಳ ಸತ್ಯ ಯಾತ್ರೆ ನಡೆಯಲಿದ್ದು, ರಾಜ್ಯದ ಸಮಸ್ಥ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಅಂದು ಧರ್ಮಸ್ಥಳದಲ್ಲಿ ನಡೆಯುವ ಸತ್ಯಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಳಲಿದ್ದು, ಕೊಪ್ಪಳ ಜಿಲ್ಲೆಯ ಸಾವಿರಾರು ಕಾರ್ಯಕರ್ತರು ಭಾಗವಹಿಸಬೇಕು ಎಂದು ಕರೆ ನೀಡಿದ ಜೆಡಿಎಸ್ ಮುಖಂಡು ಬುರುಡೆ ಪ್ರಕರಣದ ಸತ್ಯಾಸತ್ಯತೆ ಹೊರ ಬರಲು ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಅಗ್ರಹಿಸಿದರು. ಗುರುವಾರ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಜೆಡಿಎಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ತಾಲೂಕು ಅಧ್ಯಕ್ಷ ವಿರೇಶಗೌಡ ಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ, ಜೆಡಿಎಸ್ ಓಬಿಸಿ ಘಟಕದ ಜಿಲ್ಲಾಧ್ಯಕ್ಷ ಕರಿಯಪ್ಪ ನಾಮದಾರ ಮತ್ತಿತರರು ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ರಾಜ್ಯದ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸಲು ದೊಡ್ಡ ಷಡ್ಯಂತರ ನಡೆಯುತ್ತಿದೆ. ಧರ್ಮಸ್ಥಳದ ಭಕ್ತರ ನಂಬಿಕೆಗೆ ದ್ರೋಹ ಬಗೆಯುವ ಕೆಲಸ ಮಾಡಲು ಕೆಲವರು ಹೊರಟಿದ್ದಾರೆ. ಇದನ್ನು ಹತ್ತಿಕ್ಕುವ ಕೆಲಸ ಸರಕಾರ ಮಾಡದೇ ಮೌನವಹಿಸಿದೆ. ಕಾಣದ ಕೈಗಗಳನ್ನು ಗುರುತಿಸಿ ನ್ಯಾಯಕ್ಕೆ ಜಯ ಸಿಗಬೇಕು ಮತ್ತು ಧರ್ಮಕ್ಕೆ ಗೆಲುವಾಗಬೇಕು. ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಸಿ.ವಿ.ಚಂದ್ರಶೇಖರ, ಜಿಲ್ಲಾಧ್ಯಕ್ಷ ಸುರೇಶ ಭೂಮರೆಡ್ಡಿ, ಯುವ ಘಟಕದ ರಾಜ್ಯ ಕಾರ್ಯಾಧ್ಯಕ್ಷ ರಾಜು ನಾಯಕ, ರಾಜ್ಯ ಕಾರ್ಯದರ್ಶಿ ವಿರೇಶ ಮಹಾಂತಯ್ಯನಮಠ ಸೇರಿದಂತೆ ಜಿಲ್ಲೆಯ ಎಲ್ಲಾ ಹಿರಿಯ ನಾಯಕರ ತಿರ್ಮಾನದಂತೆ ಕೊಪ್ಪಳ ಜಿಲ್ಲೆಯಯಿಂದ ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಧರ್ಮಸ್ಥಳ ಸತ್ಯ ಯಾತ್ರೆಗೆ ತೆರಳಲು ಕರೆ ನೀಡಿದ್ದಾರೆ. ಹೀಗಾಗಿ ಜಿಲ್ಲೆಯ ಎಲ್ಲಾ ಮುಖಂಡರು, ಕಾರ್ಯಕರ್ತರು ಈ ಯಾತ್ರೆಯಲ್ಲಿ ಭಾಗವಹಿಸಬೇಕು. ಮತ್ತು ಧರ್ಮಸ್ಥಳ ಸಮಸ್ಥ ಭಕ್ತರು ಕೂಡಾ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಈ ಯಾತ್ರೆಯಲ್ಲಿ ಪಾಲ್ಗೊಂಡು ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸುವುದರ ಜೊತೆಗೆ ಪ್ರಮಾಣಿಕ ತನಿಖೆಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಗೆ ವಹಿಸುವಂತೆ ಒತ್ತಾಯಿಸಬೇಕು ಎಂದು ಮನವಿ ಮಾಡಿದರು. ಗೋಷ್ಟಿಯಲ್ಲಿ ಜೆಡಿಎಸ್ ಪಕ್ಷದ ಸಂಸ್ಕೃತಿಕ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ ಸೊರಟೂರು, ಮುಖಂಡರಾದ ಮಾರುತಿಗೌಡ ಹಿರೇಬಗನಾಳ, ವೆಂಕನಗೌಡ ಬೊಮ್ಮನಾಳ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 