ನಾನೇ ಸಿಎಂ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯಗೆ ಬರಬಾರದಿತ್ತು: ಜೆಡಿಎಸ್
JDS statement
ಬೆಂಗಳೂರು: ಮುಂದಿನ 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗುವ ಕರ್ಮ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಜೆಡಿಎಸ್ ಲೇವಡಿ ಮಾಡಿದೆ.
‘ಐದು ವರ್ಷ ನಾನೇ ಮುಖ್ಯಮಂತ್ರಿ. ಆ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದರು. ಇದೇ ವಿಚಾರವಾಗಿ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೆಡಿಎಸ್, ‘ನಾನೇ ಸಿಎಂ.. ನಾನೇ ಸಿಎಂ.. ಎಂದು ಮಾಧ್ಯಮಗಳ ಮುಂದೆ ಗಂಟಲು ಹರಿದುಕೊಳ್ಳುತ್ತಿರುವುದರ ಹಿಂದೆ ಸಿಎಂ ಕುರ್ಚಿ ಅಲುಗಾಡುತ್ತಿರುವುದನ್ನು ಸೂಚಿಸುತ್ತಿದೆ’ ಎಂದು ಕುಟುಕಿದೆ.
‘ಲಾಟರಿ ಸಿಎಂ’ ಸಿದ್ದರಾಮಯ್ಯ ಅವರೇ, ನಿಮ್ಮ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ನಿಮ್ಮ ನಾಯಕತ್ವದ ಬಗ್ಗೆ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೆಂಕಿ ಎದ್ದು, ಹಾದಿ ಬೀದಿಯಲ್ಲಿ ಹೊಗೆಯಾಡುತ್ತಿದೆ. ವಿಪಕ್ಷಗಳ ವಿರುದ್ಧ ಬೆಂಕಿಯುಗುಳಿದರೇ, ನಿಮ್ಮ ಹೊಟ್ಟೆ ಕಿಚ್ಚು ಮತ್ತಷ್ಟು ಉಲ್ಬಣಿಸುತ್ತದೆ ಹೊರತು ಉಪಶಮನವಾಗುವುದಿಲ್ಲ ಎಂದು ಜೆಡಿಎಸ್ ಕಿಡಿಕಾರಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 